ಬಂಟ್ವಾಳ: ಮಹಿಳೆ ಮೇಲೆ ಸಂಬಂಧಿಕರಿಂದ ಅತ್ಯಾಚಾರ
ಬಂಟ್ವಾಳ: ಮಹಿಳೆಯೊಬ್ಬರ ಮೇಲೆ ಆಕೆಯ ಸಂಬಂಧಿಕರಿಬ್ಬರು ಅತ್ಯಾಚಾರವೆಸಗಿದ ಘಟನೆ ವಿಟ್ಲ ಕಸಬಾ ಗ್ರಾಮದ ಚಂದಳಿಕೆ ಎಂಬಲ್ಲಿ ಭಾನುವಾರ ರಾತ್ರಿ ನಡೆದಿದ್ದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಲ್ಲಿನ ಡೆಪ್ಪಿನಿ ಎಂಬಲ್ಲಿ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿ ಒಬ್ಬರೇ ಇರುವಾಗ ಒಳಪ್ರವೇಶಿಸಿದ ಆಕೆಯ ಮೈದುನ ರುಜಿತ್ ಹಾಗೂ ಆತನ ಸಂಬಂಧಿ ನವೀನ ಎಂಬಾತ ಅತ್ಯಾಚಾರ ನಡೆಸಿದ್ದು, ಈ ಬಗ್ಗೆ ಯಾರಲ್ಲಾದರೂ ಹೇಳಿದರೆ ಮಗು, ಗಂಡ ಹಾಗೂ ನಿನ್ನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಅತ್ಯಾಚಾರಕ್ಕೊಳಗಾದ ಮಹಿಳೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಅವರ ಪತ್ತೆಗಾಗಿ ವಿಟ್ಲ ಪೊಲೀಸರು ಬಲೆ ಬೀಸಿದ್ದಾರೆ.