ಮೈಸ್ ವಿದ್ಯಾರ್ಥಿ ಸುದೀಪ್ ಸಿ.ಜಿ. 'ರಾಷ್ಟ್ರೀಯ ಪ್ರತಿಭಾ ವಿದ್ಯಾರ್ಥಿ'
ಮಂಗಳೂರು: ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆಯಲ್ಲಿ ರಾಷ್ಟ್ರೀಯ ಪ್ರತಿಭಾ ವಿದ್ಯಾರ್ಥಿಯಾಗಿ ಉಡುಪಿ ಮೈಸ್ನಿಂದ ಸುದೀಪ್ ಸಿ.ಜಿ. ಆಯ್ಕೆಯಾಗಿದ್ದಾರೆ.
ಪಿಎಚ್ಡಿ ವರೆಗೆ ಮಾಸಿಕ 500 ರಂತೆ ವಿದ್ಯಾರ್ಥಿ ವೇತನ ನೀಡಲಾಗುವುದು. ಭಾರತ ಸರ್ಕಾರದ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಹಾಗೂ ತರಬೇತಿ ಸಂಸ್ಥೆ 10ನೇ ತರಗತಿಯಲ್ಲಿ ಕಲಿಯುತ್ತಿರುವ 1 ಸಾವಿರ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪ್ರತಿಭಾನ್ವೇಷಣೆ ಯೋಜನೆ ಮೂಲಕ ವಿದ್ಯಾರ್ಥಿ ವೇತನ ನೀಡುತ್ತಿದೆ. ಸರ್ಕಾರವು ಪ್ರತಿ ತಿಂಗಳು ಇಂತಹ ವಿದ್ಯಾರ್ಥಿಗಳಿಗೆ ಪಿಎಚ್ಡಿ ವಿದ್ಯಾಭ್ಯಾಸ ಮಾಡುವ ವರೆಗೆ ವಿದ್ಯಾರ್ಥಿ ವೇತನ ನೀಡುತ್ತವೆ.