ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಮತ್ತೆ ಕೆಲಸ ನೀಡಲು ಆಗ್ರಹ: ಹೋರಾಟ ಸಿದ್ಧತೆ

Lingaraj Badiger
Updated On : 26 Sept 2013, 11:46 am

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಭದ್ರತಾ ಸಿಬ್ಬಂದಿಯಾಗಿ ಗುತ್ತಿಗೆಯಡಿ ಕಳೆದ 6-7 ವರ್ಷಗಳಿಂದ ಕೆಲಸ ನಿರ್ವಹಿಸಿ ಈಗ ಕೆಲಸ ಕಳೆದುಕೊಂಡ ಕಾರ್ಮಿಕರ ಸಮಾಲೋಚನಾ ಸಭೆ ಮಂಗಳವಾರ ವೆಲಂಕಣಿ ಸಭಾಂಗಣದಲ್ಲಿ ಊರಿನ ಪ್ರಮುಖರ ಸಮ್ಮುಖದಲ್ಲಿ ನಡೆದು, ಸಮಿತಿ ರಚನೆ ಹಾಗೂ ಹೋರಾಟಕ್ಕೆ ಸಿದ್ಧತೆ ಮಾಡಲಾಯಿತು.
ಸುಬ್ರಹ್ಮಣ್ಯ ತಾ.ಪಂ. ಸದಸ್ಯೆ ವಿಮಲಾ ರಂಗಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿ.ಪಂ ಸದಸ್ಯ ಕೆ.ಎಸ್. ದೇವರಾಜ್, ಸಂಕಷ್ಟದಲ್ಲಿರುವ ಕಾರ್ಮಿಕರ ಸಮಸ್ಯೆಗಳಿಗೆ  ಪರಿಹಾರ ಕಂಡುಕೊಳ್ಳುವಲ್ಲಿ ಜನಪ್ರತಿನಿಧಿಯಾಗಿ ತಾನು ಸಹಕರಿಸುವುದಾಗಿ ಹೇಳಿದರು.
ಗ್ರಾ.ಪಂ. ಸದಸ್ಯ ನಾರಾಯಣ ಅಗ್ರಹಾರ ಮಾತನಾಡಿ, ನಿರುದ್ಯೋಗ ಸಮಸ್ಯೆಯಿಂದ ತೊಳಲಾಡುತ್ತಿರುವ ಸಂದಿಗ್ಧ ಪರಿಸ್ಥಿತಿಯಲ್ಲಿ ಇರುವ ಕೆಲಸ  ಕಸಿದುಕೊಳ್ಳುತ್ತಿರುವುದು ಸರಿಯಲ್ಲ. ಸರ್ಕಾರವೇ ಒಂದು ರೀತಿಯಲ್ಲಿ ಪರೋಕ್ಷವಾಗಿ ನಕ್ಸಲೀಯರಾಗಲು ಅವಕಾಶ ಮಾಡಿಕೊಡುತ್ತಿದೆ ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾವತಿ, ಗ್ರಾಮ ಪಂಚಾಯಿತಿ  ಸದಸ್ಯೆ ಲಕ್ಷ್ಮೀ, ಗ್ರಾ.ಪಂ ಮಾಜಿ ಉಪಾಧ್ಯಕ್ಷ ಬಾಲಕೃಷ್ಣ ಮರೀಲ್, ಐನೆಕಿದು ಸುಬ್ರಹ್ಮಣ್ಯ ಸಹಕಾರಿ ಬ್ಯಾಂಕ್ ನಿರ್ದೇಶಕ ರವೀಂದ್ರ ರುದ್ರಪಾದ, ಮಹಿಳೆಯರ ವಿವಿಧೋದ್ದೇಶ ಸಹಕಾರಿ ಬ್ಯಾಂಕ್ ನಿರ್ದೇಶಕಿ ಲೀಲಾ ಮನಮೋಹನ್ ಮುಖ್ಯ ಅತಿಥಿಯಾಗಿದ್ದರು.
ಸಮಿತಿ ರಚನೆ: ವಿವಿಧ ಕ್ಷೇತ್ರಗಳಲ್ಲಿ ದುಡಿಯುವ ಎಲ್ಲ ವರ್ಗದವರನ್ನು ಸೇರಿಸಿಕೊಂಡು ಕಾರ್ಮಿಕ ಸಂಘಟನೆ ರಚಿಸಿ ಹೋರಾಟ ನಡೆಸುವ ಬಗ್ಗೆ ಸಭೆಯಲ್ಲಿದ್ದವರು ಅಭಿಪ್ರಾಯ ವ್ಯಕ್ತಪಡಿಸಿದರು. ಅದರಂತೆ ನೂತನ ಹೋರಾಟ ಸಮಿತಿ ರಚಿಸಲಾಯಿತು.
 ಶೇಷಕುಮಾರ ದೇವರಗದ್ದೆ, ರವೀಂದ್ರ ನೂಚಿಲ, ಕಿಶೋರ್ ಅರಂಪಾಡಿ, ಲೋಲಾಕ್ಷ ಕೈಕಂಬ, ಮನೋಜ್ ಕೈಕಂಬ ಮೊದಲಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement