ಅರ್ಜಿ ಆಹ್ವಾನ
ಮಂಗಳೂರು: ಮಂಗಳೂರು ತಾಲೂಕಿನ ವಿವಿಧ ಶಾಲೆ ಮತ್ತು ಕಾಲೇಜಿನಲ್ಲಿ 5ನೇ ತರಗತಿಯಿಂದ ಮೇಲ್ಪಟ್ಟು ವ್ಯಾಸಂಗ ಮಾಡುತ್ತಿರುವ ಅಲೆಮಾರಿ ಜನಾಂಗಕ್ಕೆ ಸೇರಿದ ಗೊಲ್ಲ ಮತ್ತು ಜೋಗಿ ಜಾತಿಗೆ ಸೇರಿದ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹಧನ ಹಾಗೂ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಗೊಲ್ಲ ಮತ್ತು ಜೋಗಿ ಸಮುದಾಯಕ್ಕೆ ಸೇರಿದ 5-10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲಾಗುತ್ತದೆ. ವಿದ್ಯಾರ್ಥಿಗಳ ವಾರ್ಷಿಕ ಆದಾಯ ರು. 2 ಲಕ್ಷ ಮೀರಿರಬಾರದು. ಪಿಯುಸಿ ಮೇಲ್ಪಟ್ಟ ವಿವಿಧ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಹತಾ ವಿದ್ಯಾರ್ಥಿವೇತನ ಪಡೆಯಬಹುದು. ರು. 2.50 ವಾರ್ಷಿಕ ಆದಾಯ ಮೀರಿರಬಾರದು. ಅರ್ಜಿಯನ್ನು ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿಯಿಂದ ಪಡೆಯಬಹುದು. ಅ. 31 ಅರ್ಜಿ ಸಲ್ಲಿಸಲು ಕೊನೆ ದಿನ ಎಂದು ಪ್ರಕಟಣೆ ತಿಳಿಸಿದೆ.