ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಇಂದು ಶಾಲೆಕಾಲೇಜು ಬಂದ್‌ಗೆ ಕರೆ

Rashmi Kasaragodu
Updated On : 27 Sept 2013, 12:00 pm

ಮಂಗಳೂರು: ರಥಬೀದಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಅಕ್ಷತಾರವರ ನಿಗೂಢ ಸಾವಿನ ಕುರಿತು ಸಮಗ್ರ ತನಿಖೆಗೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸೆ. 27 ರಂದು ಮಂಗಳೂರು ಮಹಾನಗರದ ವ್ಯಾಪ್ತಿಯ ಶಾಲಾ ಕಾಲೇಜು ಬಂದ್‌ಗೆ ಕರೆ ನೀಡಿದೆ.
ವಿದ್ಯಾರ್ಥಿನಿಯರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅತ್ಯಾಚಾರಗಳ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಅಲ್ಲದೆ ಪ್ರತಿದಿನ ಪತ್ರಿಕೆಗಳಲ್ಲಿ ಯುವತಿಯರ ನಾಪತ್ತೆ ಪ್ರಕರಣಗಳು ಕಂಡು ಬರುತ್ತಿದ್ದು, ಇದರ ತನಿಖೆ ಎತ್ತ ಸಾಗುತ್ತಿದೆ ಎಂಬುದೇ ತಿಳಿಯದಾಗಿದೆ.
ದ.ಕ. ಜಿಲ್ಲೆಯಲ್ಲಿ ವಿದ್ಯಾರ್ಥಿನಿಯರ ದೌರ್ಜನ್ಯ, ಬೆಳ್ತಂಗಡಿಯ ಸೌಜನ್ಯ ಪ್ರಕರಣ ಸೇರಿದಂತೆ ಸಮಗ್ರ ತನಿಖೆ ನಡೆಸಬೇಕು. ವಿದ್ಯಾರ್ಥಿನಿಯರ ಸುರಕ್ಷತೆಗೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಸಂಘ ಬೆಳಗ್ಗೆ 10.30ಕ್ಕೆ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement