'ಸೌಜನ್ಯ ಹತ್ಯಾಚಾರ ಪ್ರಕರಣ ಮುಚ್ಚಿಹಾಕಲು ಅವಕಾಶ ನೀಡೆವು'
ಬೆಳ್ತಂಗಡಿ: ಸೌಜನ್ಯಾ ಹತ್ಯಾಚಾರ ಪ್ರಕರಣವನ್ನು ಸಾಕ್ಷ್ಯಾಧಾರದ ಕೊರತೆ ಇದೆ ಎಂದು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ. ಹಾಗಾಗಲು ಸಿಪಿಎಂ ಅವಕಾಶ ನೀಡುವುದಿಲ್ಲ ಎಂದು ರಾಜ್ಯ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್. ಲಕ್ಷ್ಮೀ ಎಚ್ಚರಿಸಿದ್ದಾರೆ.
ಅವರು ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ಸಿಪಿಎಂ ಪಕ್ಷವು ಈ ವಿಚಾರವನ್ನು ಮುಂದಿಟ್ಟು ಚುನಾವಣೆ ಎದುರಿಸುತ್ತಿದೆ. ಚುನಾವಣೆಯ ಬಳಿಕವೂ ಹೋರಾಟ ಮುಂದುವರಿಯಲಿದೆ ಎಂದರು. ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ ಎಂದರು. ದೇಶದಾದ್ಯಂತ ಮಹಿಳೆಯರ ಮೇಲೆ ಪ್ರತಿ ನಿಮಿಷಕ್ಕೆ ಮೂರು ಅತ್ಯಾಚಾರಗಳು ನಡೆಯತ್ತಿವೆ. ಈ ಬಗ್ಗೆ ಚಿಂತನೆ ನಡೆಸಲು ಆ ಪಕ್ಷಗಳಿಗೆ ಸಮಯವೇ ಇಲ್ಲ ಎಂದು ಆರೋಪಿಸಿದರು.