ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಎಸ್‌ಡಿಪಿಐನಿಂದ ಬಿಜೆಪಿ ಗೆಲವಿಗೆ ಸಹಕಾರ: ಆರೋಪ

Mainashree
Updated On : 11 Apr 2014, 11:03 am

ಮಡಿಕೇರಿ: ಜೆಡಿಎಸ್ ಜತೆ ಕೈಜೋಡಿಸಿರುವ ಎಸ್‌ಡಿಪಿಐ ಅಲ್ಪಸಂಖ್ಯಾತರ ಮತಗಳನ್ನು ವಿಭಜಿಸಿ ಬಿಜೆಪಿ ಗೆಲುವಿಗೆ ಪರೋಕ್ಷವಾಗಿ ಸಹಕಾರ ನೀಡುತ್ತಿದೆ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಜಿಲ್ಲಾಧ್ಯಕ್ಷ ಎಂ.ಎ. ಯಾಕೂಬ್ ಆರೋಪಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸುವುದಿಲ್ಲ ಎಂಬುದು ತಿಳಿದಿದ್ದರೂ ಜೆಡಿಎಸ್‌ಗೆ ಬೆಂಬಲ ಸೂಚಿಸಿ ಕಾಂಗ್ರೆಸ್ ಮತಗಳನ್ನು ವಿಭಜಿಸುವ ತಂತ್ರಕ್ಕೆ ಎಸ್‌ಡಿಪಿಐ ಮುಂದಾಗಿದೆ ಎಂದು ಆರೋಪಿಸಿದರು. ಮಂಗಳೂರು ಕ್ಷೇತ್ರದಲ್ಲಿ ಎಸ್‌ಡಿಪಿಐ ತನ್ನ ಅಭ್ಯರ್ಥಿ ಕಣಕ್ಕಿಳಿಸಿ ಬಿಜೆಪಿ ಬೆಂಬಲಕ್ಕೆ ನಿಂತಿದೆ. ಆದರೆ ಅಲ್ಪಸಂಖ್ಯಾತರು ಕಾಂಗ್ರೆಸ್ ಪರವಾಗಿದ್ದು, ಯಾವುದೇ ತಂತ್ರಗಳಿಗೆ ಜನ ಮರುಳಾಗುವುದಿಲ್ಲ ಎಂದು ಯಾಕೂಬ್ ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ಕಾರ್ಮಿಕರ ಘಟಕದ ರಾಜ್ಯ ಉಪಾಧ್ಯಕ್ಷ ಮಹಮ್ಮದಾಲಿ ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ಅಲ್ಪಸಂಖ್ಯಾತರ ಘಟಕ ಕಾರ್ಯದರ್ಶಿ ಅಗಸ್ಟಿನ್ ಜಯರಾಜ್, ಪ್ರಮುಖರಾದ ಗೋಪಾಲ್, ರೆಹಮತ್, ಷರೀಫ್ ಹಾಗೂ ಪ್ರೇಮ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement