ಮತದಾನ ಮಹತ್ವ ಕುರಿತು ಬೀದಿ ನಾಟಕ
ಕುಶಾಲನಗರ: ಚುನಾವಣಾ ಆಯೋಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಡಗು ಚುನಾವಣಾ ಶಾಖೆ, ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಕಲಾಸಾಗರ ವತಿಯಿಂದ ಗುರುವಾರ ಗೊಂದಿ ಬಸವನಹಳ್ಳಿ ಗ್ರಾಮದಲ್ಲಿ ಮತದಾನದ ಮಹತ್ವ ಕುರಿತು ಬೀದಿ ನಾಟಕ ಪ್ರದರ್ಶನ ನಡೆಯಿತು.
ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿಅಧಿಕಾರಿ ಹೂವಯ್ಯ ಮತ್ತು ಗೊಂದಿ ಬಸವನಹಳ್ಳಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಎಚ್.ಎ. ಕುಮಾರ್ ಕಂಜಿರ ಬಾರಿಸುವ ಮೂಲಕ ಉದ್ಘಾಟಿಸಿದರು.
ಕಲಾವಿದ ಇ. ರಾಜು ನೇತೃತ್ವದಲ್ಲಿ ಕಲಾವಿದರು ಬೀದಿ ನಾಟಕ ಪ್ರದರ್ಶಿಸಿ, ಯಾವುದೇ ಆಸೆ, ಆಮಿಷಗಳಿಗೆ ಮತದಾರರು ಒಳಗಾಗದೆ ತಮ್ಮ ಹಕ್ಕನ್ನು ಚಲಾಯಿಸಬೇಕೆಂದು ಅರಿವು ಮೂಡಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲ ನಾಯಕ್, ಮಣಜೂರು ಮಂಜುನಾಥ್ ಇದ್ದರು.