ಕಟೀಲು: ಮೇ 5ರಂದು ಸಾಮೂಹಿಕ ವಿವಾಹ
ಮೂಲ್ಕಿ: ಕಟೀಲಿನ ಶ್ರೀ ಗೋಪಾಲಕೃಷ್ಣ ಆಸ್ರಣ್ಣ ಟ್ರಸ್ಟ್ ಹಾಗೂ ಕೆ. ಲಕ್ಷ್ಮೀನಾರಾಯಣ ಆಸ್ರಣ್ಣ ಅಭಿನಂದನಾ ಸಮಿತಿ ಆಶ್ರಯದಲ್ಲಿ ಮೇ 5ರ ಸಂಜೆ ಕಟೀಲಿನ ಗೋಪಾಲಕೃಷ್ಣ ಆಸ್ರಣ್ಣ ಸಭಾಭವನದಲ್ಲಿ ಸಾಮೂಹಿಕ ವಿವಾಹ ಸಮಾರಂಭ ಜರುಗಲಿದೆ. ಕೊಡ್ಯಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಳದ ಧರ್ಮದರ್ಶಿ ಜಯರಾಮ ಹೆಗ್ಡೆ ಉದ್ಘಾಟನೆ ನೆರವೇರಿಸಲಿದ್ದಾರೆ. ಬೆಂಗಳೂರಿನ ಉದ್ಯಮಿ ಪಿ. ರಾಮದಾಸ ಮಡ್ಮಣ್ಣಾಯ ಅಧ್ಯಕ್ಷತೆ ವಹಿಸಲಿದ್ದು, ಮುಂಬೈನ ಪೊವಾಯಿಯ ರುಂಡಮಾಲಿನಿ ಮಂದಿರದ ಶ್ರೀ ಸುವರ್ಣ ಬಾಬಾ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಕಿನ್ನಿಗೋಳಿಯ ಯುಗಪುರುಷ ಪತ್ರಿಕೆ ಸಂಪಾದಕ ಕೆ. ಭುವನಾಭಿರಾಮ ಉಡುಪ, ಮಂಗಳೂರಿನ ಉದ್ಯಮಿ ಧನಂಜಯ ಆಚಾರ್ ಭಾಗವಹಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.