ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Lingaraj Badiger
Updated On : 3 Feb 2014, 11:35 am

ಮೂಲ್ಕಿ: ಇಲ್ಲಿನ ಕೆಂಚನಕೆರೆಯಲ್ಲಿ ಮುಳುಗಿ ಪ್ರೌಢಶಾಲೆ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.
ಕೆ.ಎಸ್. ರಾವ್ ನಗರದ ಬಿಸಿಎಂ ಹಾಸ್ಟೆಲ್‌ನಲ್ಲಿ ವಾಸ್ತವ್ಯವಿರುವ ಮೂಲ್ಕಿ ಮೆಡಲಿನ್ ಶಾಲೆಯ 9ನೇ ತರಗತಿ ವಿದ್ಯಾರ್ಥಿ, ಮೂಲತಃ ಚಿಕ್ಕಮಗಳೂರಿನ ಅಕ್ಷಯ್ ಮೃತ ಬಾಲಕ.
ಅಕ್ಷಯ್ ಇತರ ಐವರು ವಿದ್ಯಾರ್ಥಿಗಳೊಂದಿಗೆ ಭಾನುವಾರ ಮಧ್ಯಾಹ್ನ ಮೂಲ್ಕಿ- ಕಿನ್ನಿಗೋಳಿ ರಾಜ್ಯ ಹೆದ್ದಾರಿಯಲ್ಲಿರುವ ಕೆಂಚನಕೆರೆಗೆ ಈಜಾಡಲು ಹೋಗಿದ್ದರು. ಕೆರೆ ದಂಡೆಯಲ್ಲಿ ಕುಳಿತಿದ್ದ ಅಕ್ಷಯ್ ಕಾಲು ಜಾರಿ ನೀರಿಗೆ ಬಿದ್ದಿದ್ದು, ಇದನ್ನು ಗಮನಿಸಿದ ಇತರ ವಿದ್ಯಾರ್ಥಿಗಳು ಬೊಬ್ಬೆ ಹಾಕಿದರು. ಕೂಡಲೆ ಸ್ಥಳೀಯರು ಆಗಮಿಸಿ ಕೆರೆಗೆ ಹಾರಿ ಹುಡುಕಿ, ಬಾಲಕನನ್ನು ಮೇಲೆತ್ತಲಾಯಿತಾದರೂ ಅದಾಗಲೇ ಮೃತಪಟ್ಟಿದ್ದ. ಈ ಬಗ್ಗೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಲ್ಕಿಯ ಸರ್ಕಾರಿ ಆಸ್ಪತ್ರೆಯಲ್ಲಿ ಶವದ ಮಹಜರು ನಡೆಸಲಾಗಿದೆ. ಚಿಕ್ಕಮಗಳೂರಿನ ಕಳ್ಳಲ್ಲಿಯವರಾದ ಬಾಲಕನ ಮನೆಯವರು ಮೂಲ್ಕಿಗೆ ಆಗಮಿಸಿದ್ದಾರೆ. ಮೃತ ದೇಹವನ್ನು ಚಿಕ್ಕಮಗಳೂರಿಗೆ ಕೊಂಡೊಯ್ಯಲಾಗಿದೆ ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement