ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಪೊಲೀಸರ ಅಮಾನತು ಆಗ್ರಹಿಸಿ ಪ್ರತಿಭಟನೆ

Mainashree
Updated On : 4 Feb 2014, 10:16 am

ಮಂಗಳೂರು: ಬಜರಂಗದಳ ಕಾರ್ಯಕರ್ತ ಮನೋಜ್ ಎಂಬವರಿಗೆ ದೈಹಿಕ ಹಿಂಸೆ ನೀಡಿದ ಬರ್ಕೆ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿಗಳನ್ನು ತಕ್ಷಣವೇ ಅಮಾನತುಗೊಳಿಸುವಂತೆ ವಿಶ್ವಹಿಂದೂ ಪರಿಷತ್ತು ಮತ್ತು ಬಜರಂಗದಳ ನಗರ ಪೊಲೀಸ್ ಕಮಿಷನರ್‌ನ್ನು ಒತ್ತಾಯಿಸಿದೆ.
 ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಂಘಟನೆ ಕಾರ್ಯಕರ್ತರು, ಈ ಇಬ್ಬರು ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಮಂಗಳೂರು ನಗರದಲ್ಲಿರುವ ಬಜರಂಗದಳದ 79 ಶಾಖೆಗಳಿಂದ ಅಲ್ಲಲ್ಲಿ ರಸ್ತೆ ತಡೆ, ಅದೂ ಫಲಕಾರಿಯಾಗದ್ದಿದ್ದರೆ ಬಂದ್ ಕರೆ ನೀಡಲಾಗುವುದು ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಚಾಲಕ ಶರಣ್ ಪಂಪ್‌ವೆಲ್ ಎಚ್ಚರಿಕೆ ನೀಡಿದರು.
 ವಿಹಿಂಪ ಜಿಲ್ಲಾ ಕಾರ್ಯಾಧ್ಯಕ್ಷ ಜಗದೀಶ್ ಶೇಣವ ಮಾತನಾಡಿ, ಜ.25ರಂದು ಪಾಂಡೇಶ್ವರ ಮನೆಯಿಂದ ಮನೋಜ್‌ನ್ನು ಬಲಾತ್ಕಾರವಾಗಿ ಠಾಣೆಗೆ ಕರೆದೊಯ್ದರು. ಕೆ.ಸಿ.ರೋಡ್‌ನಲ್ಲಿ ನಡೆದ ಘಟನೆಗೆ ಸಂಬಂಧಿಸಿ ಸಂಶಯದಿಂದ ಠಾಣೆಯಲ್ಲಿ ಮೂರನೇ ದರ್ಜೆಯ ಹಿಂಸೆ ನೀಡಿದ್ದಾರೆ. ಅಲ್ಲದೆ ಆತನ ವಿರುದ್ಧ ಸುಳ್ಳು ದೂರು ದಾಖಲಿಸಿದ್ದಾರೆ. ಇನ್ನರೆಡು ದಿನದಲ್ಲಿ ಕ್ರಮ ಕೈಗೊಳ್ಳದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ನುಡಿದರು.
ವಿಹಿಂಪ ಪ್ರಾಂತ ಕಾರ್ಯದರ್ಶಿ ಕೃಷ್ಣಮೂರ್ತಿ, ಜಿಲ್ಲಾ ಕಾರ್ಯದರ್ಶಿ ಗೋಪಾಲ್ ಕುತ್ತಾರ್, ಬಜರಂಗದಳ ಜಿಲ್ಲಾ ಸಂಚಾಲಕ ಭುಜಂಗ ಕುಲಾಲ್, ಸಹ ಸಂಚಾಲಕ ಪ್ರವೀಣ್ ಕುತ್ತಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement