ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಎತ್ತಿನ ಹೊಳೆ; ಡೀವಿ ಸಹಿ ದಾಖಲೆ ಬಹಿರಂಗಪಡಿಸಲು ಕಾಂಗ್ರೆಸ್‌ಗೆ ಸುನಿಲ್ ಕುಮಾರ್ ಆಗ್ರಹ

Lingaraj Badiger
Updated On : 5 Feb 2014, 11:31 am

ಪುತ್ತೂರು:  ಎತ್ತಿನ ಹೊಳೆ ಯೋಜನೆ ಕೇಂದ್ರ ಸಚಿವ ವೀರಪ್ಪ ಮೈಲಿ ಕೂಸು. ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಈ ಯೋಜನೆಗೆ ಸಹಿ ಹಾಕಿದ್ದಾರೆ ಎಂಬುದು ಕಾಂಗ್ರೆಸ್ ಹಬ್ಬಸಿದ ಸುಳ್ಳು ಸುದ್ದಿ, ಅವರು ಸಹಿ ಮಾಡಿದ್ದರೆ ಅದರ ಕುರಿತು ದಾಖಲೆಯನ್ನು ಕಾಂಗ್ರೆಸ್ ಬಹಿರಂಗಪಡಿಸಲಿ ಎಂದು ರಾಜ್ಯ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷ, ಕಾರ್ಕಳ ಶಾಸಕ ಸುನಿಲ್ ಕುಮಾರ್ ಸವಾಲು ಹಾಕಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಂದ 18ರಿಂದ ರಾಜ್ಯದಲ್ಲಿ ಎರಡನೇ ಸುತ್ತಿನ ಪ್ರಚಾರ ಕಾರ್ಯ ನಡೆಯಲಿದೆ. 18 ರಂದು ಬೆಳಗ್ಗೆ ದಾವಣಗೆರೆ, ಮಧ್ಯಾಹ್ನ 3 ಗಂಟೆಗೆ ಮಂಗಳೂರಿನಲ್ಲಿ ಮೋದಿ ನೇತೃತ್ವದಲ್ಲಿ ಬಿಜೆಪಿ ಸಮಾವೇಶ ನಡೆಯಲಿದೆ. ಮಂಗಳೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಉಡುಪಿ ಹಾಗೂ ದ.ಕ. ಜಿಲ್ಲೆಯಿಂದ ಸುಮಾರು 1 ಲಕ್ಷ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ ಎಂದರು. ಎರಡನೇ ಸುತ್ತಿನ ಪ್ರಚಾರ ಕಾರ್ಯ ಮುಗಿದ ಬಳಿಕ ಲೋಕಸಭಾ ಚುನಾವಣಾ ಪ್ರಚಾರಕ್ಕೆ ವೇಗ ನೀಡಲಿದ್ದೇವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳ ಕುರಿತು ಮನೆ ಮನೆಗೆ ಭೇಟಿ ಜನರಿಗೆ ತಿಳುವಳಿಕೆ ನೀಡಲಿದ್ದೇವೆ ಎಂದರು.ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ನಳಿನ್ ಕುಮಾರ್ ಕಟೀಲು ಹೆಸರನ್ನು ದ.ಕ. ಜಿಲ್ಲೆಗೆ ಹಾಗೂ ಡಿ.ವಿ. ಸದಾನಂದ ಗೌಡ, ಶಾಸಕ ಸಿ.ಟಿ. ರವಿ ಹೆಸರನ್ನು ರಾಜ್ಯಕ್ಕೆ ಶಿಫರಾಸ್ಸು ಮಾಡಲಾಗಿದೆ ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ತಾಲೂಕು ಪ್ರಧಾನ ಕಾರ್ಯದರ್ಶಿ ಸಾಜ ರಾಧಾಕೃಷ್ಣ ಆಳ್ವ, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಯುವಮೋರ್ಚಾ ಅಧ್ಯಕ್ಷ ಶಿವರಂಜನ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement