ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ನಕ್ರೆ ಚೇತನಾ ಫ್ರೆಂಡ್ಸ್ ಕ್ಲಬ್‌ಗೆ ಜಿಲ್ಲಾ ಸಾಂಘಿಕ ಯುವ ಪ್ರಶಸ್ತಿ

Lingaraj Badiger
Updated On : 5 Feb 2014, 11:29 am

ಬೆಳ್ಮಣ್ಣು: ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಾರ್ಕಳ ತಾಲೂಕು ಯುವ ಜನ ಒಕ್ಕೂಟ ಮತ್ತು ಸ್ಪೋರ್ಟ್ಸ್ ಕ್ಲಬ್ ಬೆಳ್ಮಣ್ಣು ಆಶ್ರಯದಲ್ಲಿ ಇತ್ತೀಚೆಗೆ ನಡೆದ ಉಡುಪಿ ಜಿಲ್ಲಾ ಮಟ್ಟದ ಯುವ ಜನ ಮೇಳ ಸಂಸ್ಕೃತಿ 2013-14ರ ಕಾರ್ಯಕ್ರಮದಲ್ಲಿ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಸಾಧನೆಗಾಗಿ ಕಾರ್ಕಳ ನಕ್ರೆ ಚೇತನಾ ಫ್ರೆಂಡ್ಸ್ ಕ್ಲಬ್‌ಗೆ ಜಿಲ್ಲಾ ಸಾಂಘಿಕ ಯುವ ಪ್ರಶಸ್ತಿ ನೀಡಲಾಯಿತು. ಸಚಿವರಾದ ವಿನಯ ಕುಮಾರ್ ಸೊರಕೆ, ಕೆ. ಅಭಯಚಂದ್ರ ಜೈನ್, ಜಿ.ಪಂ. ಅಧ್ಯಕ್ಷ ಉಪೇಂದ್ರ ನಾಯಕ್, ಶಾಸಕ ಸುನಿಲ್ ಕುಮಾರ್, ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ, ಸರ್ಕಾರಿ ಪ.ಪೂ. ಕಾಲೇಜಿನ ಪ್ರಾಂಶುಪಾಲ ಡಾ.ಬಿ. ಜನಾರ್ದನ ಭಟ್, ಜಿ.ಪಂ. ಸದಸ್ಯರಾದ ಸುಪ್ರೀತ್ ಶೆಟ್ಟಿ ಕೆದಿಂಜೆ, ಜಿಲ್ಲಾ ಯುವಜನ ಒಕ್ಕೂಟ ಅಧ್ಯಕ್ಷ ಮನೋಹರ್ ಕುಂದರ್, ನಿವೃತ್ತ ಶಿಕ್ಷಕ ಜಯಂತ್ ರಾವ್, ಸೇವಾ ಪ್ರತಿನಿಧಿ ವಾಸುದೇವ ನಾಯಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ಬೆಳ್ಮಣ್ಣು ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷ ಪ್ರಕಾಶ್ ಆಚಾರ್ಯ, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ರಾಜೇಶ್ ಸಾಲಿಯಾನ್, ನಾರಾಯಣ ರಾವ್, ಡಾ. ರೋಶನ್ ಕುಮಾರ್ ಶೆಟ್ಟಿ, ಅಧ್ಯಕ್ಷ ಸದಾನಂದ ಪ್ರಭು, ರಘು ಆಚಾರ್ಯ, ಜಯರಾಮ್ ಆಚಾರ್ಯ, ಗೋಕುಲ್‌ದಾಸ್ ನಾಯಕ್, ಸನತ್, ಧೀರಜ್ ಶೆಟ್ಟಿ, ಜಯಕೃಷ್ಣ ಪೂಜಾರಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement