ಸ್ಥಳದಲ್ಲೇ ಮೃತಪಟ್ಟ ಇಬ್ಬರು ದಂಪತಿ
ಬಂಟ್ವಾಳ: ಸರಪಾಡಿಯಲ್ಲಿ ಸಂಬಂಧಿಕರೊಬ್ಬರ ಮದುವೆಯ ಔತಣ ಮುಗಿಸಿ ಭಾಸ್ಕರ್ ಅವರ ರಿಕ್ಷಾದಲ್ಲಿ ಸೋಮವಾರ ರಾತ್ರಿ ವಾಪಾಸ್ಸಾಗುತ್ತಿದ್ದ ವೇಳೆ ಪಾಣೆಮಂಗಳೂರು ಸೇತುವೆಯಲ್ಲಿ ಈ ಘಟನೆ ಸಂಭವಿಸಿದೆ.
ಅಪಘಾತ ಸಂಭವಿಸಿದ ತಕ್ಷಣ ಬಸ್ ಚಾಲಕ ಮತ್ತು ನಿರ್ವಾಹಕ ಬಸ್ ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.
ಸೇತುವೆಯ ಮಧ್ಯದಲ್ಲಿಯೇ ಅಪಘಾತ ಸಂಭವಿಸಿದ್ದರಿಂದ ಸುಮಾರು ಒಂದು ಗಂಟೆ ಕಾಲ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿತ್ತು.
ಬಸ್ ಚಾಲಕನ ಅತಿವೇಗದ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅವಘಡಕ್ಕೆ ಕಾರಣ ಎನ್ನಲಾಗಿದೆ. ಆದರೆ, ರಿಕ್ಷಾ ರಸ್ತೆಯ ತೀರಾ ಬಲಭಾಗದಲ್ಲಿ ಚಲಿಸಿ ಎದುರಿನಿಂದ ಬಂದ ಬಸ್ಗೆ ಡಿಕ್ಕಿ ಹೊಡೆದಿದೆ ಎಂದು ಸ್ಥಳದಲ್ಲಿ ತನಿಖೆ ನಡೆಸಿದ ಪೊಲೀಸರು ತಿಳಿಸಿದ್ದಾರೆ.
ಭಾಸ್ಕರ ಬರಿಮಾರಿನಲ್ಲಿ ದಿನಸಿ ಅಂಗಡಿ ಮತ್ತು ಪುಟ್ಟ ಹೊಟೇಲ್ ನಡೆಸುತ್ತಿದ್ದರು.
ಬಾಡಿಗೆಗೆ ಆಟೋ ರಿಕ್ಷಾ ಕೂಡ ಇಟ್ಟಿದ್ದರು. ಜಗದೀಶ್ ಬಾಬನಕಟ್ಟೆಯಲ್ಲಿ ದಿನಸಿ ಅಂಗಡಿ ನಡೆಸುತ್ತಿದ್ದರು.
ಮಾಹಿತಿ ಪಡೆದಾಕ್ಷಣ ಸ್ಥಳಕ್ಕೆ ಬಂಟ್ವಾಳ ವೃತ್ತನಿರೀಕ್ಷಕ ರಾಜಶೇಖರ್ ಮಿಸ್ತ್ರಿ, ಠಾಣಾಧಿಕಾರಿಕಾರಿಗಳಾದ ಸಂಜಯ್, ನಾಗರಾಜ್ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಮೃತದೇಹಗಳನ್ನು ಬಂಟ್ವಾಳದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಈ ಸಂದರ್ಭ ಆಸ್ಪತ್ರೆಯ ಬಳಿಯಲ್ಲೂ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು.