ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಇಂದಿನಿಂದ ವಾರ್ಷಿಕೋತ್ಸವ

Rashmi Kasaragodu
Updated On : 13 Feb 2014, 11:57 am

ಮಂಗಳೂರು: ಮಂಗಳೂರಿನ ಶ್ರೀನಿವಾಸ ಶಿಕ್ಷಣ ಸಮೂಹ ಸಂಸ್ಥೆಗಳ ವಾರ್ಷಿಕೋತ್ಸವ ಫೆ.13ರಿಂದ 15ರ ವರೆಗೆ ನಡೆಯಲಿದೆ.  ಈ ಸಂದರ್ಭ ಕರ್ಣಾಟಕ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಪಿ.ಜಯರಾಮ ಭಟ್, ಸಮಾಜಸೇವಕ ಚಾರ್ಮಾಡಿ ಹಸನಬ್ಬ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸದಾನಂದ ಅವರನ್ನು ಪುರಸ್ಕರಿಸಲಾಗುವುದು ಎಂದು ಮಹಾವಿದ್ಯಾಲಯ ಪ್ರಾಚಾರ್ಯ ಡಾ.ಶ್ರೀನಿವಾಸ ಮಯ್ಯ ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.  13ರಂದು ಬೆಳಗ್ಗೆ 10ಕ್ಕೆ ಶ್ರೀನಿವಾಸ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವ ನಡೆಯಲಿದ್ದು, ಸಮೂಹ ಸಂಸ್ಥೆಗಳ 12 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸುವರು. ಮಂಗಳೂರು ಎಂಆರ್‌ಪಿಎಲ್ ಆಡಳಿತ ನಿರ್ದೇಶಕ ಪಿ.ಪಿ.ಉಪಾಧ್ಯ ಅತಿಥಿಯಾಗಿ ಆಗಮಿಸುವರು ಎಂದರು.  14ರಂದು ಬೆಳಗ್ಗೆ 10.30ಕ್ಕೆ ಸ್ಥಾಪಕರ ದಿನಾಚರಣೆ ನಡೆಯಲಿದ್ದು, ಶ್ರೀನಿವಾಸ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿ ವಿಶ್ವವಿದ್ಯಾಲಯ ಮಟ್ಟದಲ್ಲಿ ರ್ಯಾಂಕ್ ಗಳಿಸಿದ 10 ಮಂದಿ ವಿದ್ಯಾರ್ಥಿಗಳಿಗೆ ಎ ಶಾಮರಾವ್ ಪ್ರತಿಷ್ಠಾನದಿಂದ ಚಿನ್ನದ ಪದಕ ನೀಡಿ ಗೌರವಿಸಲಾಗುವುದು. ಪಿ.ಜಯರಾಮ ಭಟ್‌ಗೆ ಶಾಮರಾವ್ ಸ್ಮಾರಕ ಪ್ರಶಸ್ತಿ ನೀಡಲಾಗುವುದು. ಶಾಮರಾವ್ ಸ್ಮಾರಕ ಶಿಕ್ಷಕ ಪ್ರಶಸ್ತಿಯನ್ನು ಮೂಲ್ಕಿ ಸರ್ಕಾರಿ ಪದವಿಪೂರ್ವ ಕಾಲೇಜು ಉಪನ್ಯಾಸಕ ಸದಾನಂದ ಸ್ವೀಕರಿಸಲಿದ್ದಾರೆ. ಸಮಾಜಸೇವೆಗೆ ನೀಡುವ ಶಾಮರಾವ್ ಸ್ಮಾರಕ ಪ್ರಶಸ್ತಿಯನ್ನು ಚಾರ್ಮಾಡಿ ಹಸನಬ್ಬ ಸ್ವೀಕರಿಸುವರು.  15ರಂದು ಬೆಳಗ್ಗೆ 10.30ರಿಂದ ಪದವಿ ಪ್ರದಾನ ಸಮಾರಂಭ ನಡೆಯಲಿದೆ. ಆರೋಗ್ಯ ಸಚಿವ ಯು.ಟಿ.ಖಾದರ್ ಅತಿಥಿಯಾಗಿ ಆಗಮಿಸುವರು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement