ಕಾರು ಮುಖಾಮುಖಿ: ಓರ್ವ ಗಂಭೀರ
ಮೂಲ್ಕಿ: ಕೊಳ್ನಾಡು ಸಮೀಪ ಗುಂಡಾಲುಗುತ್ತು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳೆರಡು ಮುಖಾಮುಖಿ ಡಿಕ್ಕಿಯಾಗಿದ್ದು ಓರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ.
ಮೂಲ್ಕಿ ಬಪ್ಪನಾಡು ಮೇಳದ ವ್ಯವಸ್ಥಾಪಕ ವಿನೋದ್ ಕುಮಾರ್‌ರ ಕಾರಿನ ಚಾಲಕ, ಮಂಗಳೂರಿನ ಬೊಂದೇಲ್ ನಿವಾಸಿ ಸುರೇಶ್ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರಿನಿಂದ ಮೂಲ್ಕಿ ಕಡೆಗೆ ಬರುತ್ತಿದ್ದ ಸುರೇಶ್ ಚಲಾಯಿಸುತ್ತಿದ್ದ ಕಾರು ಮತ್ತು ಮಣಿಪಾಲದಿಂದ ಬಜ್ಪೆ ಕಡೆ ಹೋಗುತ್ತಿದ್ದ ಪತ್ರಕರ್ತರಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಸುರೇಶ್ ಚಲಾಯಿಸುತ್ತಿದ್ದ ಕಾರು ಪಲ್ಟಿಯಾಗಿ ಉರುಳಿತು. ಬಜ್ಪೆ ಕಡೆ ಹೋಗುತ್ತಿದ್ದ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಅಪಘಾತದಿಂದ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ಮೂಲ್ಕಿ ಪೊಲೀಸರು ಕೂಡಲೇ ಸ್ಥಳಕ್ಕಾಗಮಿಸಿ ವಾಹನ ತೆರವುಗೊಳಿಸಿದರು. ಈ ಬಗ್ಗೆ ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.