ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ರಾಜೀವ್ ಗಾಂಧಿ ಮಾನವ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ

Lingaraj Badiger
Updated On : 21 Feb 2014, 12:59 pm

ಮಡಿಕೇರಿ: ಭಾರತ ಸರ್ಕಾರವು ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣೆ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ 10 ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಮೂವರು ವ್ಯಕ್ತಿಗಳನ್ನು ಗುರುತಿಸಿ ರಾಜೀವ್‌ಗಾಂಧಿ ಮಾನವ ಸೇವಾ ಪ್ರಶಸ್ತಿ ನೀಡಿ ಗೌರವಿಸಲಿದ್ದು, ಅರ್ಜಿ ಆಹ್ವಾನಿಸಿದೆ.
ಈ ಪ್ರಶಸ್ತಿಯನ್ನು ಪ್ರತಿವರ್ಷ ರಾಜೀವ್ ಗಾಂಧಿ ಜನ್ಮದಿನವಾದ ಆ.20ರಂದು ಪ್ರದಾನ ಮಾಡಲಾಗುವುದು. ಪ್ರತಿ ವ್ಯಕ್ತಿಗೆ ನೀಡುವ ಪ್ರಶಸ್ತಿಯು ರು. 1 ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.
ಈ ಪ್ರಶಸ್ತಿಗಾಗಿ ಆಯ್ಕೆಯಾಗುವ ವ್ಯಕ್ತಿಗಳು ಮಕ್ಕಳ ಶ್ರೇಯೋಭಿವೃದ್ಧಿಗಾಗಿ 10 ವರ್ಷಗಳಿಗೂ ಮೇಲ್ಪಟ್ಟು ಕಾರ್ಯ ನಿರ್ವಹಿಸಿರಬೇಕು. ಸಂಘ ಸಂಸ್ಥೆಗಳಲ್ಲಿ ವೇತನ ಪಡೆಯುವ ವ್ಯಕ್ತಿಗಳು ಈ ಪ್ರಶಸ್ತಿಗೆ ಅರ್ಹರಿರುವುದಿಲ್ಲ. ಈ ಪ್ರಶಸ್ತಿಗೆ ಆಯ್ಕೆ ಮಾಡಲು ಇರುವ ಒಂದೇ ಮಾನದಂಡ- ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಮಾಡಿರುವ ಕೆಲಸದ ಗುಣಮಟ್ಟ. ಅದೇ ರೀತಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಹಲವು ವರ್ಷ ಅಸಾಧಾರಣ ಸೇವೆ ಸಲ್ಲಿಸಿದ 3 ವ್ಯಕ್ತಿಗಳು ಹಾಗೂ 5 ಸಂಸ್ಥೆಗಳ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರವು ಜಾರಿಗೆ ತಂದಿದೆ. ಪ್ರತಿ ವ್ಯಕ್ತಿಗೆ ನೀಡುವ ಪ್ರಶಸ್ತಿಯು ರು. 1 ಲಕ್ಷ ಹಾಗೂ ಪ್ರಶಸ್ತಿ ಪತ್ರ ಮತ್ತು ಪ್ರತಿ ಸಂಸ್ಥೆಗೆ ನೀಡುವ ಪ್ರಶಸ್ತಿಯು ರು. 3 ಲಕ್ಷ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಸಂಘ ಸಂಸ್ಥೆಗಳಲ್ಲಿ ವೇತನ ಪಡೆಯುವ ವ್ಯಕ್ತಿಗಳು ಈ ಪ್ರಶಸ್ತಿಗೆ ಅರ್ಹರಿರುವುದಿಲ್ಲ.
ಅರ್ಜಿಯನ್ನು ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಂತಾ ಕಾಂಪ್ಲೆಕ್ಸ್, ಓಂಕಾರೇಶ್ವರ ದೇವಸ್ಥಾನ ರಸ್ತೆ, ಕೊಡಗು ಜಿಲ್ಲೆ (ದೂರವಾಣಿ 08272 -228010) ಅವರಿಗೆ ಸಲ್ಲಿಸತಕ್ಕದ್ದು. ಮಾ.15 ಕೊನೆಯ ದಿನ ಎಂದು ಮಡಿಕೇರಿ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ ಉಪ ನಿರ್ದೇಶಕಿ ಜಯಶೀಲ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement