ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ದೇರಳಕಟ್ಟೆ ಪ್ರಕರಣ: ಹೈ ತನಿಖೆಗೆ ಆಗ್ರಹ

Mainashree
Updated On : 4 Jan 2014, 9:12 am

ಮಂಗಳೂರು: ದೇರಳಕಟ್ಟೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯನ್ನು ಅಪಹರಿಸಿ ಅಶ್ಲೀಲ ದೃಶ್ಯ ಚಿತ್ರೀಕರಣ ಮಾಡಿದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದ್ದು, ಹೈಕೋರ್ಟ್ ಸುಪರ್ದಿಯಲ್ಲಿ ತನಿಖೆ ನಡೆಸುವಂತೆ ಎಬಿವಿಪಿ ಆಗ್ರಹಿಸಿದೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಭಾವಿಪ ರಾಜ್ಯ ಕಾರ್ಯದರ್ಶಿ ರಮೇಶ್, ಘಟನೆಗೆ ಸಂಬಂಧಿಸಿ ನಗರ ಪೊಲೀಸ್ ಆಯುಕ್ತ ಮತ್ತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ. ಜ.8ರಂದು ಪೊಲೀಸ್ ಕಮಿಷನರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು. 9ರಂದು ನೆಹರೂ ಮೈದಾನದಲ್ಲಿ ಮಹಿಳಾ ಜನಜಾಗೃತಿ ವೇದಿಕೆಯಿಂದ ಹೋರಾಟ ನಡೆಯಲಿದೆ. 11ರಂದು 'ಮಹಿಳಾ ಸುರಕ್ಷತೆ-ಸ್ವಾಸ್ಥ್ಯ ಸಮಾಜ' ದುಂಡು ಮೇಜಿನ ಸಮ್ಮೇಳನದಲ್ಲಿ ಪ್ರಸ್ತಾಪಗೊಳ್ಳಲಿದೆ. ಆಗಲೂ ಸಂಬಂಧಿತರು ಸ್ಪಂದಿಸದಿದ್ದರೆ ರಾಜ್ಯವ್ಯಾಪಿ ಹೋರಾಟ ನಡೆಸುವುದಾಗಿ ಹೇಳಿದರು. ವಿದ್ಯಾರ್ಥಿನಿ ದೂರು ನೀಡಿದರೂ ಪೊಲೀಸರು ಸರಿಯಾದ ತನಿಖೆ ನಡೆಸಿಲ್ಲ. ಕೇಸು ದಾಖಲಿಸಿಲ್ಲ. ವಿದ್ಯಾರ್ಥಿನಿಯ ಸಹಚರ ಡಾ. ಹಂಪಲ್‌ನ್ನು ತನಿಖೆಗೆ ಒಳಪಡಿಸಬೇಕು. ಅತ್ಯಾಚಾರ ಕೃತ್ಯಕ್ಕೆ ಬಳಸಿದ ಮನೆಯವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು. ಈ ಘಟನೆಯಲ್ಲಿ ರಾಜಕೀಯ ಹಸ್ತಕ್ಷೇಪ ಕಂಡುಬಂದಿದ್ದು, ಪ್ರಕರಣದ ತನಿಖೆಯನ್ನು ಹೈಕೋರ್ಟ್ ಸುಪರ್ದಿಯಲ್ಲಿ ನಡೆಸಬೇಕು. ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ದಾಖಲಿಸಬೇಕು. ಆರೋಪಿಗಳಿಗೆ ಉಗ್ರರ ಸಂಪರ್ಕದ ಬಗ್ಗೆ ತನಿಖೆ ನಡೆಸಬೇಕು. ಜಿಲ್ಲೆಯಲ್ಲಿ ಕಾನೂನು ವ್ಯವಸ್ಥೆ ಸರಿಪಡಿಸಬೇಕು ಎಂದು ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement