ಸುಂಟಿಕೊಪ್ಪ: ಕೋ.ಚ. ಹೇಳಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ
ಸುಂಟಿಕೊಪ್ಪ: ಹಿರಿಯ ಸಾಹಿತಿ ಕೋ. ಚನ್ನಬಸಪ್ಪ ಅವರು ಕೊಡವರ ಬಗ್ಗೆ ಅವಹೇಳನಕಾರಿಯಾಗಿ ಪುಸ್ತಕ ಬರೆದಿರುವುದರ ವಿರುದ್ಧ ಪಟ್ಟಣದಲ್ಲಿ ಬಿಜೆಪಿ ವತಿಯಿಂದ ರಸ್ತೆತಡೆ ಪ್ರತಿಭಟನೆ ನಡೆಸಲಾಯಿತು.
ಕನ್ನಡ ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಸಾಹಿತಿ ಕೊ. ಚನ್ನಬಸಪ್ಪ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ವಾಹನ ಸಂಚಾರ ಸ್ಥಗಿತಗೊಳಿಸಿದರು. ಈ ಕನ್ನಡ ವೃತ್ತದಿಂದ ಮೂರು ಭಾಗದ ರಸ್ತೆಯಲ್ಲಿಯೂ ನೂರಾರು ವಾಹನಗಳು ಸ್ಥಗಿತಗೊಂಡು ಸಂಚಾರ ಅಸ್ಥವ್ಯಸ್ಥಗೊಂಡಿತು. ಪ್ರತಿಭಟನೆಯಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಪಟ್ಟೆಮನೆ ಕೆ. ಶೇಷಪ್ಪ, ಜಿಲ್ಲಾ ಮಹಿಳಾ ಘಟಕದ ಸದಸ್ಯೆ ಬಿ.ಐ. ಭವಾನಿ, ಹರದೂರು ಗ್ರಾ.ಪಂ. ಅಧ್ಯಕ್ಷ ರಮೇಶ್, ಮಾಜಿ ಅಧ್ಯಕ್ಷರಾದ ಸೋಮಯ್ಯ, ಡಾ. ಶಶಿಕಾಂತ ರೈ, ಮಾಜಿ ಉಪಾಧ್ಯಕ್ಷ ಸದಾಶಿವ ರೈ, ಸಿ.ಸಿ. ಮಂಜುನಾಥ್, ಜಿಲ್ಲಾ ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ಡಿ.ನರಸಿಂಹ ಹಾಗೂ ಪಕ್ಷದ ಕಾರ್ಯಕರ್ತರು ಮತ್ತಿತರರು ಇದ್ದರು.