ಜುಗಾರಿ ಆಟ: ಪೊಲೀಸ್ ದಾಳಿ
ಸುಳ್ಯ: ಜುಗಾರಿ ಆಟ ಆಡುತ್ತಿದ್ದ ಸ್ಥಳಕ್ಕೆ ಸುಳ್ಯ ಪೊಲೀಸರು ದಾಳಿ ನಡೆಸಿದ ಘಟನೆ ಇಲ್ಲಿನ ದುಗಲಡ್ಕ ಎಂಬಲ್ಲಿ ನಡೆದಿದೆ. ಆರೋಪಿಗಳು ಪರಾರಿಯಾಗಿದ್ದರೆ. ಪೊಲೀಸರು ಸ್ಥಳದಲ್ಲಿದ್ದ ರು. 1040 ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿದೆ.
ನೇಣು ಬಿಗಿದು ವೃದ್ಧ ಆತ್ಮಹತ್ಯೆ
ವಿಟ್ಲ: ಇಲ್ಲಿಗೆ ಸಮೀಪದ ಕಡಂಬು ಕ್ವಾರ್ಟರ್ಸ್ ನಿವಾಸಿ ಜಿನ್ನಪ್ಪ ನಲಿಕೆ (60) ಎಂಬವರು ಭಾನುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.