ಫಿಲೋಮಿನಾ ಉಪನ್ಯಾಸಕ ನೋರ್ಬರ್ಟ್ಗೆ ಡಾಕ್ಟರೇಟ್
ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಇತಿಹಾಸ ವಿಭಾಗದಲ್ಲಿ ಸಹ ಪ್ರಾಧ್ಯಾಪಕ ನೋರ್ಬರ್ಟ್ ಮಸ್ಕರೇನ್ಹಸ್ ಅವರ “¥ÚPÐy ಕನ್ನಡ ಜಿಲ್ಲೆಯ ಸಾಮಾಜಿಕ ಬದಲಾವಣೆಯಲ್ಲಿ ಕ್ರೈಸ್ತ ಸಂಸ್ಥೆಗಳ ಪಾತ್ರ (1834-2008)’ ಎಂಬ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿ ಪುರಸ್ಕರಿಸಿದೆ. ವಿವೇಕಾನಂದ ಕಾಲೇಜಿನ ಇತಿಹಾಸ ವಿಭಾಗ ಮುಖ್ಯಸ್ಥ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಮಾರ್ಗದರ್ಶನದಲ್ಲಿ ಈ ಮಹಾಪ್ರಬಂಧ ರಚಿಸಿದ್ದಾರೆ. ಡಾ. ನೋರ್ಬರ್ಟ್ ಅವರು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿ, ಸೋಮವಾರಪೇಟೆಯ ದಿ. ಜೋಸೆಫ್ ಮತ್ತು ಎಲಿಜಬೆತ್ ಮಸ್ಕರೇನ್ಹಸ್ ದಂಪತಿ ಪುತ್ರ.