ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

18ರಂದು ಗಂಗೊಳ್ಳಿ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Rashmi Kasaragodu
Updated On : 12 Jan 2014, 2:21 am

ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಜ.18ರಂದು ನಡೆಯಲಿದೆ. ಗ್ರಾಪಂನ 33 ಸ್ಥಾನಗಳಿಗೆ ಡಿ.9ರಂದು ಚುನಾವಣೆ ನಡೆದು, ಡಿ.11ರಂದು ಫಲಿತಾಂಶ ಘೋಷಣೆಯಾಗಿತ್ತು. 19 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯ ಗಳಿಸಿದ್ದರೆ, 14 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯ ಗಳಿಸಿದ್ದರು. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ 'ಅ'ಗೆ ಮೀಸಲಾಗಿರುವ ಹಿನ್ನೆಲೆಯಲ್ಲಿ ಎರಡೂ ಪಕ್ಷದ ಸದಸ್ಯರ ನಡುವೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಏರ್ಪಟ್ಟಿದೆ. ಬಹುಮತ ಪಡೆದಿರುವ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಪಂಚಾಯಿತಿ ಆಡಳಿತ ಗದ್ದುಗೆ ಹಿಡಿಯುವ ಸಾಧ್ಯತೆಗಳಿವೆ. ಕಳೆದ ಅವಧಿಯಲ್ಲಿ 31 ಸದಸ್ಯ ಬಲದ ಗಂಗೊಳ್ಳಿ ಗ್ರಾಮ ಪಂಚಾಯಿತಿಯಲ್ಲಿ 16 ಮಂದಿ ಕಾಂಗ್ರೆಸ್ ಬೆಂಬಲಿತ ಮತ್ತು 15 ಮಂದಿ ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದರು. ಆದರೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಕಾಂಗ್ರೆಸ್ ಬೆಂಬಲಿತರಿಂದ ಅಧಿಕಾರ ಕಸಿದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಜ.18ರಂದು ನಡೆಯಲಿರುವ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಕಡೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement