ಇಂದು ಕೊಡಗು ಜಿಲ್ಲಾಮಟ್ಟದ ರಾಷ್ಟ್ರೀಯ ಯುವ ಸಪ್ತಾಹ
ಮೂರ್ನಾಡು: ಮಡಿಕೇರಿ ನೆಹರು ಯುವ ಕೇಂದ್ರ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ, ತಾ. ಯುವ ಒಕ್ಕೂಟ, ಮರಗೋಡು ಗ್ರಾಪಂ, ಭಾರತಿ ಪ.ಪೂ. ಕಾಲೇಜು ಹಾಗೂ ಮರಗೋಡು ವಿವೇಕಾನಂದ ಯುವಕ ಸಂಘದ ವತಿಯಿಂದ ವಿವೇಕಾನಂದರ 150ನೇ ವರ್ಷಾಚರಣೆ ಅಂಗವಾಗಿ ಜಿಲ್ಲಾಮಟ್ಟದ ರಾಷ್ಟ್ರೀಯ ಯುವ ಸಪ್ತಾಹ ಹಾಗೂ ವಿಷಯಾಧರಿತ ಶಿಕ್ಷಣ ಹಾಗೂ ಜಾಗೃತಿ ಕಾರ್ಯಕ್ರಮ ಭಾನುವಾರ ನಡೆಯಲಿದೆ. ಮರಗೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಬೆಳಗ್ಗೆ 9.30 ಗಂಟೆಗೆ ಆಯೋಜಿಸಲಾಗಿರುವ ಸಮಾರಂಭವನ್ನು ಗಿರೀಶ್ ತಾಳತ್ತ್ಮನೆ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಲ್ಲಚಂಡ ಕಾವೇರಪ್ಪ ಆಗಮಿಸಲಿದ್ದಾರೆ. ಭಾರತಿ ಕಾಲೇಜಿನ ಪ್ರಾಂಶುಪಾಲ ಬೆಳ್ಯಪ್ಪ ಮೆರವಣಿಗೆ ಉದ್ಘಾಟನೆ ನೆರವೇರಿಸಲಿದ್ದು ಅಧ್ಯಕ್ಷತೆಯನ್ನು ಮರಗೋಡು ಗ್ರಾಪಂ ಅಧ್ಯಕ್ಷೆ ಬಿ.ಬಿ. ಸುಜಾತ ವಹಿಸಲಿದ್ದಾರೆ. ಸಹಪ್ರಾಧ್ಯಾಪಕಿ ಕೋರನ ಸರಸ್ವತಿ ಪ್ರಕಾಶ್ ಉಪನ್ಯಾಸ ನೀಡಲಿದ್ದಾರೆ.