ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಕಾಲೇಜು ವಿದ್ಯಾರ್ಥಿನಿ ಬಸ್ ಅಡಿಗೆ ಬಿದ್ದು ಸಾವು

Rashmi Kasaragodu
Updated On : 12 Jan 2014, 2:17 am

ಪುತ್ತೂರು: ತನ್ನ ಸಹೋದರನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಆಕಸ್ಮಾತ್ ರಸ್ತೆಗೆ ಎಸೆಯಲ್ಪಟ್ಟ ವಿದ್ಯಾರ್ಥಿನಿಯೊಬ್ಬರ ಮೇಲೆ ಬಸ್ ಚಲಿಸಿದ ಪರಿಣಾಮ ಆಕೆ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಪುತ್ತೂರು ನಗರದ ಬೊಳುವಾರು ಎಂಬಲ್ಲಿ ಶನಿವಾರ ನಡೆದಿದೆ. ಕಾಸರಗೋಡು ಜಿಲ್ಲೆಯ ಪೆರಡಾಲ ತೆಲೆಕ್ಕಿ ನಿವಾಸಿ ಶಂಕರನಾರಾಯಣ ಭಟ್ ಅವರ ಪುತ್ರಿ ಶಶಿಪ್ರಭಾ(21) ಮೃತಪಟ್ಟ ವಿದ್ಯಾರ್ಥಿನಿ. ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಅಂತಿಮ ಪದವಿ ವ್ಯಾಸಂಗ ಮಾಡುತ್ತಿರುವ ಶಶಿಪ್ರಭಾ ಶನಿವಾರ ತನ್ನ ಸಹೋದರ ಮಹೇಶ್ ಕುಮಾರ್ ಎಂಬವರೊಂದಿಗೆ ಪುತ್ತೂರಿಗೆ ಬಂದಿದ್ದರು. ಇಲ್ಲಿನ ಬೊಳುವಾರಿನಲ್ಲಿರುವ ಹೊಟೇಲ್‌ನಲ್ಲಿ ಊಟ ಮಾಡಿ ಬೈಕಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಆಕೆಯ ಸೆಲ್ವಾರ್‌ನ ವೇಲ್ ಬೈಕಿನ ಚಕ್ರಕ್ಕೆ ಸಿಲುಕಿತ್ತು. ಇದರಿಂದಾಗಿ ಅವರು ಬೈಕಿನಿಂದ ರಸ್ತೆಗೆ ಎಸೆಯಲ್ಪಟ್ಟರು. ಇದೇ ವೇಳೆ ಸಾಗುತ್ತಿದ್ದ ಕೆಎಸ್‌ಆರ್ಟಿಸಿ ಬಸ್ಸಿನ ಹಿಂಭಾಗದ ಚಕ್ರ ಶಶಿಪ್ರಭಾ ಲೆ ಮೇಲೆ ಚಲಿಸಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪುತ್ತೂರು ನಗರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement