ನಾಳಿನ ಬಂದ್ ತಾತ್ಕಾಲಿಕ ಮುಂದೂಡಿಕೆ: ಬಿಜೆಪಿ
ಮಡಿಕೇರಿ: ಬಿಜೆಪಿ ಜಿಲ್ಲಾಧ್ಯಕ್ಷ ಸುಜಾಕುಶಾಲಪ್ಪ ಮೇಲಿನ ಗುಂಡಿನ ದಾಳಿ ವಿರೋಧಿಸಿ ಜ.13ರ ಸೋಮವಾರ ಬಿಜೆಪಿಯಿಂದ ನಿರ್ಧರಿಸಲಾಗಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಜಿಲ್ಲಾ ಬಿಜೆಪಿ ಪ್ರಕಟಣೆ ತಿಳಿಸಿದೆ. ಜ.9ರಂದು ನಡೆದ ಗುಂಡಿನ ದಾಳಿ ವಿರೋಧಿಸಿ ಕೊಡಗಿನ ಸಮಸ್ತ ಜನ ಶುಕ್ರವಾರ ಜಿಲ್ಲಾ ಬಂದ್ ನಡೆಸಿ ಆರೋಪಿಗಳಿಗೆ ಸೂಕ್ತ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದರು. ಜಿಲ್ಲಾ ಪೊಲೀಸರೂ ಬಿಜೆಪಿ ಮನವಿಗೆ ಸ್ಪಂದಿಸಿ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಂಡಿದ್ದು ಕೆಲವರನ್ನು ವಿಚಾರಣೆಗೊಳಪಡಿಸಿದ್ದಾರೆ. ನೈಜ ಆರೋಪಿಗಳನ್ನು ಬಂಧಿಸುವ ಪೊಲೀಸರು ಪತ್ತೆ ಹಚ್ಚುವ ವಿಶ್ವಾಸ ಇರುವ ಹಿನ್ನೆಲೆಯಲ್ಲಿ ಸೋಮವಾರದ ಉದ್ದೇಶಿತ ಪ್ರತಿಭಟನಾ ಮೆರವಣಿಗೆಯನ್ನು ಮತ್ತು ಸಭೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಕೆ. ಮನುಮುತ್ತಪ್ಪ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ಎಂ. ರವಿಕಾಳಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.