ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಬೆಲೆ ಏರಿಕೆ: ರಿಕ್ಷಾ ಸಂಚಾರ ಬಂದ್

Rashmi Kasaragodu
Updated On : 14 Jan 2014, 1:24 am

ಪುತ್ತೂರು: ಪೆಟ್ರೋಲ್ ಮತ್ತು ಗ್ಯಾಸ್ ಮೇಲಿನ ದರವನ್ನು ಹಿಂದಕ್ಕೆ ಪಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರ ರಿಕ್ಷಾ ಚಾಲಕ ಮತ್ತು ಮಾಲೀಕರ ವಿವಿಧ ಸಂಘಟನೆಗಳ ವತಿಯಿಂದ ಪುತ್ತೂರು ತಾಲೂಕಿನಾದ್ಯಂತ ರಿಕ್ಷಾ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಯಿತು.
ತಾಲೂಕಿನ ಬಿಎಂಎಸ್ ಆಟೋರಿಕ್ಷಾ ಚಾಲಕ ಮಾಲೀಕರ ಸಂಘ, ಸ್ನೇಹ ಸಂಗಮ ಆಟೋರಿಕ್ಷಾ ಚಾಲಕ ಮಾಲೀಕರ ಸಂಘ, ಸಿಐಟಿಯು ಆಟೋರಿಕ್ಷಾ ಚಾಲಕ ಮಾಲೀಕರ ಸಂಘ ಮತ್ತು ಕರ್ನಾಟಕ ಆಟೋರಿಕ್ಷಾ ಚಾಲಕ ಮಾಲೀಕರ ಸಂಘ ಸಹಭಾಗಿತ್ವದಲ್ಲಿ ಪ್ರತಿಭಟನೆ ನಡೆಯಿತು. ಬೆಳಗ್ಗೆ 6ರಿಂದ ಸಂಜೆ 6 ಗಂಟೆಯ ತನಕ ಯಾವುದೇ ರಿಕ್ಷಾಗಳು ರಸ್ತೆಗಿಳಿಯಲಿಲ್ಲ.
ಪುತ್ತೂರಿನ ಬಸ್ ನಿಲ್ದಾಣದಿಂದ ಉಪವಿಭಾಗಾಧಿಕಾರಿ ಕಚೇರಿಯತನಕ ಮೌನ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು, ಉಪವಿಭಾಗಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನಾ ಸಭೆ ನಡೆಸಿದರು.
ಸಭೆಯಲ್ಲಿ ಸ್ನೇಹ ಸಂಗಮ ಆಟೋರಿಕ್ಷಾ ಚಾಲಕ ಮಾಲೀಕರ ಸಂಘದ ಮಾಜಿ ಕಾರ್ಯದರ್ಶಿ ದಿಲೀಪ್ ಕುಮಾರ್ ಮೊಟ್ಟೆತ್ತಡ್ಕ ಮಾತನಾಡಿದರು.
ಕರ್ನಾಟಕ ಆಟೋರಿಕ್ಷಾ ಚಾಲಕ ಮಾಲೀಕರ ಸಂಘದ ಮಾಜಿ ಅಧ್ಯಕ್ಷ ಜಯರಾಮ ಕುಲಾಲ್, ಸಿಐಟಿಯು ಆಟೋರಿಕ್ಷಾ ಚಾಲಕ ಮಾಲೀಕರ ಸಂಘದ ಮಾಜಿ ಅಧ್ಯಕ್ಷ ಮೇದಪ್ಪ, ಬಿಎಂಎಸ್ ಆಟೋರಿಕ್ಷಾ ಚಾಲಕ ಮಾಲೀಕರ ಸಂಘದ ಅಧ್ಯಕ್ಷ ಸುರೇಶ್ ಸುಧಾಕರ್ ನಾಯಕ್ ಮಾತನಾಡಿದರು.
ಪ್ರತಿಭಟನೆಯಲ್ಲಿ ಸ್ನೇಹ ಸಂಗಮ ಆಟೋರಿಕ್ಷಾ ಚಾಲಕ ಮಾಲೀಕರ ಸಂಘದ ಅಧ್ಯಕ್ಷ ರಾಮದಾಸ್, ಕಾರ್ಯದರ್ಶಿ ಪ್ರಶಾಂತ್, ಬಿಎಂಎಸ್ ಆಟೋರಿಕ್ಷಾ ಚಾಲಕ ಮಾಲೀಕರ ಸಂಘದ ಕಾರ್ಯದರ್ಶಿ ರವಿ ಡಿಸೋಜ, ಕರ್ನಾಟಕ ಆಟೋರಿಕ್ಷಾ ಚಾಲಕ ಮಾಲೀಕರ ಸಂಘದ ಅಧ್ಯಕ್ಷ ಸೇಸಪ್ಪ ನಾಯ್ಕ, ಕಾರ್ಯದರ್ಶಿ ಸುಂದರ, ಸಿಐಟಿಯು ಚಾಲಕ ಮಾಲೀಕರ ಸಂಘದ ಅಧ್ಯಕ್ಷ ರಿಯಾಝ್ ಮಾಂತೂರು, ಕಾರ್ಯದರ್ಶಿ ಶ್ರೀಧರ ಕರ್ಮಲ, ಉಪ್ಪಿನಂಗಡಿ ಬಿಎಂಎಸ್ ಆಟೋರಿಕ್ಷಾ ಚಾಲಕ ಮಾಲೀಕರ ಸಂಘದ ಅಧ್ಯಕ್ಷ ಸುರೇಶ್ ಮಡಿವಾಳ, ಮಾಡಾವು ಕರ್ನಾಟಕ ಆಟೋರಿಕ್ಷಾ ಚಾಲಕ ಮಾಲೀಕರ ಸಂಘದ ಅಧ್ಯಕ್ಷ ಪದ್ಮನಾಭ, ಈಶ್ವರರಮಂಗಲ ಬಿಎಂಎಸ್ ಆಟೋರಿಕ್ಷಾ ಚಾಲಕ ಮಾಲೀಕರ ಸಂಘದ ಅಧ್ಯಕ್ಷ ರವೀಂದ್ರ ಗೌಡ, ನೆಲ್ಯಾಡಿ, ತಿಂಗಳಾಡಿ, ಮಾಡಾವು, ಕುಂಬ್ರ, ರೆಂಜ, ಅರ್ಲಪದವು ಮತ್ತಿತರ ಕೇಂದ್ರಗಳ ರಿಕ್ಷಾ ಚಾಲಕ ಮಾಲೀಕರ ಸಂಘದ ಪದಾಧಿಕಾರಿಗಳು ಇದ್ದರು. ರಿಕ್ಷಾ ಓಡಾಟ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಶಾಲೆ ಮಕ್ಕಳು ಪರದಾಡುವಂತಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement