ಮಂಗಳೂರು ವ್ಯಕ್ತಿಯಿಂದ ಜರ್ಮನ್ ಮಹಿಳೆಗೆ ಲೈಂಗಿಕ ಕಿರುಕುಳ?
ಚೆನ್ನೈ: ಮಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಎಕ್ಸ್ಪ್ರೆಸ್ ರೈಲಿನಲ್ಲಿ ಜರ್ಮನಿಯ ಮಹಿಳೆಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿದ್ದಾರೆ. ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿ ಮಂಗಳೂರು ಮೂಲದವ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಮಂಗಳೂರಿಗೆ ತೆರಳಿದ್ದಾರೆ. ಆ ಮಹಿಳೆಯ ಹೇಳಿಕೆ ಆಧಾರದಲ್ಲಿ ರೇಲ್ವೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಮಾತ್ರವಲ್ಲದೆ ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.