ಕಲ್ಲಡ್ಕ ವಿರುದ್ಧ ಗೂಂಡಾ ಕಾಯ್ದೆ ಹಾಕಿ: ಶ್ರೀರಾಮ ರೆಡ್ಡಿ
ಮಂಗಳೂರು: ಕೋಮು ಪ್ರಚೋದನಕಾರಿಯಾಗಿ ಮಾತನಾಡಿದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಬೇಕು. ಬಂಧಿಸದೆ ಇದ್ದಲ್ಲಿ ಜಿಲ್ಲೆ ಸಚಿವರಿಗೆ ಘೆರಾವ್ ಹಾಕಲಾಗುವುದು ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ವಿ. ಶ್ರೀರಾಮರೆಡ್ಡಿ ಆಗ್ರಹಿಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಸಿಪಿಎಂ ಪ್ರತಿಭಟನೆ ಸಭೆಯಲ್ಲಿ ಮಾತನಾಡಿದರು.