ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಜೋಡಿಗೆ ಹಲ್ಲೆ ನಡೆದಿಲ್ಲ, ವಿದ್ಯಾರ್ಥಿನಿ ಅಡ್ಡಗಟ್ಟಿದ್ದಕ್ಕೆ ಕೇಸ್

Rashmi Kasaragodu
Updated On : 17 Jan 2014, 12:51 pm

ಮಂಗಳೂರು: ಸುರತ್ಕಲ್ ಬೀಚ್‌ನಲ್ಲಿ ಅಡ್ಡಾಡುತ್ತಿದ್ದ ವೇಳೆ ಸ್ಥಳೀಯರ ಕೈಗೆ ಸಿಕ್ಕಿ ಬಿದ್ದ ನೌಷಾದ್ ತನ್ನ ಮೇಲೆ ಹಲ್ಲೆ ನಡೆದಿಲ್ಲ ಎಂದು ಪೊಲೀಸ್ ಕಮಿಷನರ್‌ಗೆ ಹೇಳಿಕೆ ನೀಡಿದ್ದಾನೆ.  ಕೆಲವರು ನನ್ನ ವಿಚಾರಣೆ ನಡೆಸಿ, ಸುರತ್ಕಲ್ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ನನ್ನ ಮೇಲೆ ಹಲ್ಲೆ ನಡೆಸಿಲ್ಲ ಎಂದು ನೌಷಾದ್ ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸ್ ಕಮಿಷನರ್ ಆರ್.ಹಿತೇಂದ್ರ ಕನ್ನಡಪ್ರಭಕ್ಕೆತಿಳಿಸಿದ್ದಾರೆ.  ಆದರೆ ಸ್ಥಳೀಯ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಮಾತನಾಡಿಸಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಿಸಲಾಗಿದೆ ಎಂದು ಕಮಿಷನರ್ ಆರ್.ಹಿತೇಂದ್ರ ಸ್ಪಷ್ಟಪಡಿಸಿದ್ದಾರೆ.

ನೇಣು ಬಿಗಿದು ಆತ್ಮಹತ್ಯೆ
ಉಡುಪಿ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಹೊಸಂಗಡಿ ಗ್ರಾಮದ ನಡೆದಿದೆ. ಮಾರುತಿ (40) ಮೃತರು. ಇವರಿಗೆ ಲಿವರ್ ನಲ್ಲಿ ತೊಂದರೆಯಿದ್ದು ಔಷಧ ಮಾಡಿದರೂ ಗುಣಮುಖವಾಗದಿದ್ದುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬೀಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಸಹೋದರ ಕೃಷ್ಣ ಶೆಟ್ಟಿ ನೀಡಿದ ದೂರಿನಂತೆ ಅಮಾಸೆಬೈಲು ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಷ ಸೇವಿಸಿ ಯುವತಿ ಸಾವು
ಮಣಿಪಾಲ: ವಿಷ ಸೇವಿಸಿ ಯುವತಿ ಮೃತಪಟ್ಟ ಘಟನೆ ಇಲ್ಲಿನ ಶಿವಳ್ಳಿ ಗ್ರಾಮದ ಮಣಿಪಾಲ ವೈಷ್ಣವಿ ಅಭಿಮಾನ್ ಹೊಟೇಲ್ ಬಳಿ ಗುರುವಾರ ನಡೆದಿದೆ. ದೀಪಶ್ರೀ (23) ಮೃತರು. ಇವರು ವೈಷ್ಣವಿ ಅಭಿಮಾನ್ ಹೊಟೇಲ್ ಬಳಿ ಇರುವ ತಮ್ಮ ಮನೆಯಲ್ಲಿ ಮಂಗಳವಾರ ಇಲಿ ಪಾಷಾಣ ಸೇವಿಸಿದ್ದು ಚಿಕಿತ್ಸೆಗಾಗಿ ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾರೆ.  ದೀಪಶ್ರೀಗೆ ಹೆತ್ತವರು ಬುದ್ದಿವಾದ ಹೇಳಿದಕ್ಕೆ ಅವರನ್ನು ಹೆದರಿಸುವ ಉದ್ದೇಶದಿಂದ ಈ ಕೃತ್ಯ ಮಾಡಿದ್ದಾಗಿ ವಿನಯ್ ಕುಮಾರ್ ನೀಡಿದ ದೂರಿನಂತೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement