ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ರಾಜ್ಯದಲ್ಲಿ ತುಘಲಕ್ ಸರ್ಕಾರ: ನಳಿನ್

Mainashree
Updated On : 20 Jan 2014, 11:31 am

ಬಂಟ್ವಾಳ: ಗೃಹ ಇಲಾಖೆಗೆ ಪೊಲೀಸರ ಮೇಲೆ ನಿಯಂತ್ರಣ ಇಲ್ಲ, ಕಾಂಗ್ರೆಸ್ ಮುಖಂಡರು ರಾಜ್ಯದಲ್ಲಿ ಗೂಂಡಾ ರಾಜ್ಯ ನಿರ್ಮಾಣ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಸಿದ್ದರಾಮಯ್ಯ ನೇತೃತ್ವದ ತುಘಲಕ್ ಸರ್ಕಾರ ಎಂದು ಸಂಸದ ನಳಿನ್ ಕುಮಾರ್ ಕಟೀಲು ಆರೋಪಿಸಿದ್ದಾರೆ.
ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ನೇತೃತ್ವದಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ಸಾರಥ್ಯದಲ್ಲಿ ನಡೆಯುತ್ತಿರುವ 'ಗ್ರಾಮದೆಡೆಗೆ ಬಿಜೆಪಿ ನಡಿಗೆ' ಪಾದಯಾತ್ರೆಯ 3ನೇ ದಿನವಾದ ಗುರುವಾರ ಸಂಜೆ ಕರೋಪಾಡಿ ಗ್ರಾಮದ ಮಿತ್ತನಡ್ಕದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ವಿಧಾನಪರಿಷತ್ ಸದಸ್ಯ ಮೋನಪ್ಪ ಭಂಡಾರಿ ಮಾತನಾಡಿದರು. ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ಜಿ.ಆನಂದ ಅಧ್ಯಕ್ಷತೆ ವಹಿಸಿದ್ದರು. ಪಾದಯಾತ್ರೆಯ ನೇತಾರ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ಮಾತನಾಡಿದರು. ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಸುಲೋಚನಾ ಭಟ್, ಕ್ಷೇತ್ರ ಬಿಜೆಪಿ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ, ದೇವಪ್ಪ ಪೂಜಾರಿ, ದಿನೇಶ್ ಭಂಡಾರಿ,  ಸ್ಥಾನೀಯ ಸಮಿತಿ ಅಧ್ಯಕ್ಷ ಮುರಳೀಕೃಷ್ಣ ಭಟ್, ವಿಘ್ನೇಶ್ವರ ಭಟ್ ಇದ್ದರು. ಕಾರ್ಯಕ್ರಮ ಸಂಚಾಲಕ ದೇವದಾಸ ಶೆಟ್ಟಿ ಸ್ವಾಗತಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement