ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಚುನಾವಣೆಗಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಅಪಪ್ರಚಾರ: ಹೆಗ್ಡೆ ಆರೋಪ

Mainashree
Updated On : 21 Jan 2014, 11:54 am

ಉಡುಪಿ: ಬಿಜೆಪಿಯ ಆರೋಪದಂತೆ ಕೇಂದ್ರ ಸರ್ಕಾರ ಅಡಕೆ ನಿಷೇಧಿಸುತ್ತದೆ ಎಂದು ಎಲ್ಲೂ ಹೇಳಿಲ್ಲ. ಆದರೂ ಚುನಾವಣೆ ಸಮೀಪಿಸುತ್ತಿರುವಂತೆ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ, ಪಕ್ಷದ ಕಾರ್ಯಕರ್ತರು ಸತ್ಯ ಏನೆಂಬುದನ್ನು ಜನತೆಗೆ ತಿಳಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸೋಮವಾರ ನಡೆದ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಬಗ್ಗೆ ಎಷ್ಟೆ ಭರವಸೆಗಳನ್ನು ನೀಡಿದ್ದರೂ ಅವು ಈಡೇರಿಲ್ಲ, ಆದರೆ ಕಾಂಗ್ರೆಸ್ ನಾಯಕರ ಪ್ರಯತ್ನದಿಂದ ರಾಜ್ಯ ಸರ್ಕಾರ ಸಕ್ಕರೆ ಕಾರ್ಖಾನೆಯ ಕಾರ್ಮಿಕರಿಗೆ, ರೈತರಿಗೆ ಅನುಕೂಲವಾಗುವಂತೆ ರು. 12 ಕೋಟಿ  ಬಿಡುಗಡೆ ಮಾಡಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಲೋಕಸಭಾ ಚುನಾವಣೆ ಸಿದ್ಧತೆ ಸಲುವಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ವ್ಯಾಪ್ತಿಯ ಎಲ್ಲಾ ಹತ್ತು ಬ್ಲಾಕ್ ಸಮಿತಿಗಳಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಲಾಗುವುದು ಎಂದರು.
ಫೆ.2ರಂದು ಉಡುಪಿ ಮತ್ತು ಬ್ರಹ್ಮಾವರ ಬ್ಲಾಕ್, 3ರಂದು ಕಾರ್ಕಳ ಮತ್ತು ಹೆಬ್ರಿ ಬ್ಲಾಕ್, 4ರಂದು ಕಾಪು (ದಕ್ಷಿಣ) ಮತ್ತು ಕಾಪು (ಉತ್ತರ), 7ರಂದು ಬೈಂದೂರು ಮತ್ತು ವಂಡ್ಸೆ ಬ್ಲಾಕ್, 8ರಂದು ಕೋಟ ಮತ್ತು ಕುಂದಾಪುರ ಬ್ಲಾಕ್‌ಗಳ  ಸಮಾವೇಶ ನಡೆಯುವುದು ಎಂದು ಅವರು ಪ್ರಕಟಿಸಿದರು.
ಶಾಸಕ ಪ್ರಮೋದ್ ಮಧ್ವರಾಜ್, ಕೆಪಿಸಿಸಿ ಕಾರ್ಯದರ್ಶಿಗಳಾದ ಎಂ.ಎ. ಗಫೂರ್, ಶ್ಯಾಮಲ ಭಂಡಾರಿ, ಕೆಪಿಸಿಸಿ ಸದಸ್ಯರಾದ ಭುಜಂಗ ಶೆಟ್ಟಿ, ದಿನೇಶ್ ಪುತ್ರನ್, ಮಾಜಿ ಶಾಸಕರಾದ ಬಿ. ಬಸವರಾಜ್, ಜಿಲ್ಲಾ
ಕಾಂಗ್ರೆಸ್ ಸೇವಾದಳ ಮುಖ್ಯ ಸಂಘಟಕ ಅಶೋಕ್ ಕೊಡವೂರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವೆರೋನಿಕಾ ಕರ್ನೇಲಿಯೋ, ಜಿಲ್ಲಾ ಎಸ್.ಸಿ. ಘಟಕದ ಅಧ್ಯಕ್ಷ ಎಸ್. ನಾರಾಯಣ, ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷ ಶಶಿಧರ ಶೆಟ್ಟಿ ಎಲ್ಲೂರು, ಜಿಲ್ಲಾ ಇಂಟಕ್  ಅಧ್ಯಕ್ಷ ಮುರಳಿ ಶೆಟ್ಟಿ, ಬ್ಲಾಕ್ ಕಾಂಗ್ರೆಸ್  ಅಧ್ಯಕ್ಷರಾದ ಎಸ್. ಸಂಜೀವ ಶೆಟ್ಟಿ ವಂಡ್ಸೆ, ಮಲ್ಯಾಡಿ ಶಿವರಾಮ ಶೆಟ್ಟಿ ಕುಂದಾಪುರ, ಶಂಕರ್ ಕುಂದರ್ ಕೋಟ, ಬಿರ್ತಿ ರಾಜೇಶ್ ಶೆಟ್ಟಿ  ಬ್ರಹ್ಮಾವರ, ಸುಧೀರ್ ಹೆಗ್ಡೆ, ನವೀನಚಂದ್ರ ಜೆ. ಶೆಟ್ಟಿ, ನೀರೆ ಕೃಷ್ಣ ಶೆಟ್ಟಿ ಹೆಬ್ರಿ, ಸರಳಾ ಕಾಂಚನ್, ಕೃಷ್ಣರಾಜ್ ಸರಳಾಯ, ಶಬ್ಬೀರ್ ಅಹ್ಮದ್, ಕಿಷನ್ ಹೆಗ್ಡೆ ಕೊಳ್ಕೆಬೈಲ್, ದಿವಾಕರ ಕುಂದರ್ ಇದ್ದರು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ದನ ತೋನ್ಸೆ ನಿರೂಪಿಸಿದರು. ಬಿ. ನರಸಿಂಹಮೂರ್ತಿ ಸ್ವಾಗತಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement