ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಎತ್ತಿನಹೊಳೆ ವಿರುದ್ಧ ಸದನದಲ್ಲಿ ಪ್ರಸ್ತಾಪ: ಗಣೇಶ್ ಕಾರ್ಣಿಕ್

Mainashree
Updated On : 22 Jan 2014, 2:19 am

ಮಂಗಳೂರು: ಎತ್ತಿನಹೊಳೆ ಯೋಜನೆ ಜಾರಿಗೊಳಿಸಲು ಮುಂದಾಗಿರುವ ಸರ್ಕಾರದ ಕ್ರಮಕ್ಕೆ ದ.ಕ.ಜಿಲ್ಲಾ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಈ ವಿಚಾರವನ್ನು ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ವಿಧಾನ ಪರಿಷತ್ತು ಸದಸ್ಯ ಗಣೇಶ್ ಕಾರ್ಣಿಕ್ ಹೇಳಿದ್ದಾರೆ.
 ಮಂಗಳವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇಸಗೆ 3 ತಿಂಗಳಲ್ಲಿ ಕುಡಿವ ನೀರಿನ ಸಮಸ್ಯೆ ಇರುವ ನದಿಗಳ ಮೂಲಸೆಲೆಯನ್ನೇ ಬತ್ತಿಸುವ ಯೋಜನೆ ಇದಾಗಿದೆ. ಇದಕ್ಕೆ ಮಾಜಿ ಮುಖ್ಯಮಂತ್ರಿ ಯಾವುದೋ ಕಾರಣದಿಂದ ಹಣ ಮೀಸಲಿಟ್ಟಿದ್ದಾರೆ. ಪರಮಶಿವಯ್ಯ ಅವರು ಮಾಹಿತಿ ಕೊರತೆ ಹಾಗೂ ತಪ್ಪು ಮಾಹಿತಿ ಆಧಾರದಲ್ಲಿ ಯೋಜನಾ ವರದಿ ಸಿದ್ಧಪಡಿಸಿದ್ದಾರೆ. ಈ ಯೋಜನೆ ಶಂಕುಸ್ಥಾಪನೆ ಹಿಂದೆ ರಾಜಕೀಯ ಎದ್ದು ಕಾಣುತ್ತಿದೆ. ಆದ್ದರಿಂದ ಜಿಲ್ಲೆಯ ಕುಡಿವ ನೀರಿಗೆ ತೊಂದರೆ ಉಂಟುಮಾಡುವ, ಪಶ್ಚಿಮ ಘಟ್ಟಕ್ಕೆ ಹಾನಿ ಎಸಗುವ ಎತ್ತಿನಹೊಳೆ ಯೋಜನೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು. ಬಿಜೆಪಿ ಮಾಧ್ಯಮ ಪ್ರಮುಖ ಸತೀಶ್ ಪ್ರಭು, ವಕ್ತಾರ ದಿವಾಕರ ಸಾಮಾನಿ ಹಾಜರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement