ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಗಣರಾಜ್ಯೋತ್ಸವ: ಇಂದು ಆಧಾರ್‌ಗೆ ರಜೆ

Mainashree
Updated On : 26 Jan 2014, 11:00 am

ಮಂಗಳೂರು: ದ.ಕ. ಜಿಲ್ಲೆಯ ಸುಳ್ಯ ಮತ್ತು ಬೆಳ್ತಂಗಡಿ ತಾಲೂಕು ಹೊರತುಪಡಿಸಿ ಉಳಿದ ಎಲ್ಲ ತಾಲೂಕುಗಳಲ್ಲಿರುವ ಒಟ್ಟು 8 ಆಧಾರ್ ಕೇಂದ್ರಗಳಿಗೆ, ಮಂಗಳೂರು ಮಹಾನಗರ ಪಾಲಿಕೆ, ಕದ್ರಿ ಮಲ್ಲಿಕಟ್ಟೆ, ಪೆರ್ಮನ್ನೂರು, ಉಳ್ಳಾಲ, ಸುರತ್ಕಲ್, ಬಿ.ಸಿ ರೋಡ್, ಪುತ್ತೂರು, ಉಪ್ಪಿನಂಗಡಿಯಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ರಜೆ ಇದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೌಹಾರ್ದತೆ ಸಂಕಲ್ಪ: ಇಂದು ಮಾನವ ಸರಪಳಿ
ಮಂಗಳೂರು: ಎಸ್‌ಕೆಎಸ್‌ಎಸ್‌ಎಫ್ ದ.ಕ.ಜಿಲ್ಲಾ ಸಮಿತಿಯಿಂದ ಗಣರಾಜ್ಯೋತ್ಸವ ಸಲುವಾಗಿ ರಾಷ್ಟ್ರ ರಕ್ಷಣೆಗೆ ಸೌಹಾರ್ದತೆ ಸಂಕಲ್ಪದಡಿ ಜ.26ರಂದು ಮಾನವ ಸರಪಳಿ ಕಾರ್ಯಕ್ರಮ ಕೃಷ್ಣಾಪುರದಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಮೈದಿನಬ್ಬ ಹಾಜಿ ತಿಳಿಸಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಜೆ 4ರಿಂದ 9ರ ತನಕ ಕಾರ್ಯಕ್ರಮ ನಡೆಯಲಿದೆ. ಕಾಟಿಪಳ್ಳ ಸಂಶುದ್ದೀನ್ ವೃತ್ತದಿಂದ ಮೆರವಣಿಗೆಗೆ ಸಯ್ಯದ್ ಆಲಿ ತಂಞಳ್ ಚಾಲನೆ ನೀಡುವರು. ಕೃಷ್ಣಾಪುರ 7ನೇ ಬ್ಲಾಕ್‌ನ ಫಿಝಾ ಮೈದಾನದಲ್ಲಿ ಮೆರವಣಿಗೆ ಸಮಾಪ್ತಿಯಾಗಲಿದೆ. ನಂತರ ಸಭಾ ಕಾರ್ಯಕ್ರಮವನ್ನು ಜಿಲ್ಲಾ ಖಾಝಿ ಸೈಖುನಾ ತ್ವಾಖ ಅಹಮ್ಮದ್ ಮುಸ್ಲಿಯಾರ್ ಉದ್ಘಾಟಿಸುವರು. ಆಶಿಕ್ ಕುಝಿಪ್ಪುರಂ, ಸಿದ್ದೀಕ್ ಅಝ್‌ಹರಿ, ಅಬ್ದುಲ್ ಅಝೀಝ್ ದಾರಿಮಿ, ಅಬ್ಬಾಸ್ ದಾರಿಮಿ ಮುಖ್ಯ ಭಾಷಣ ಮಾಡುವರು ಎಂದರು.

ಬೈಕ್ ಡಿಕ್ಕಿ: ಪಾದಚಾರಿಗೆ ಗಾಯ
ಉಡುಪಿ: ಇಲ್ಲಿನ ಕುಂಜಿಬೆಟ್ಟು ಓಕುಡೆ ಟವರ್ಸ್ ಮುಂಭಾಗದ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ಗಾಯಗೊಂಡ ಘಟನೆ ಗುರುವಾರ ನಡೆದಿದೆ. ಗಾಯಗೊಂಡವರನ್ನು ಅನಂತ ಪೈ ಎಂದು ಗುರುತಿಸಲಾಗಿದೆ. ಆರೋಪಿ ಬೈಕ್ ಸವಾರ ದ್ರಪರಾಜ ಎಂಬವರು ಬೈಕ್‌ನ್ನು ವೇಗವಾಗಿ ಚಲಾಯಿಸಿಕೊಂಡು ಬಂದಿರುವುದೇ ಈ ಅಪಘಾತಕ್ಕೆ ಕಾರಣ ಎಂಬುದಾಗಿ ಅನಂತ ಪೈ ನೀಡಿದ ದೂರಿನಂತೆ ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement