ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಉತ್ತಮ ಕಾರ್ಯದಲ್ಲಿ ಟೀಕೆಗೆ ಎದೆಗುಂದದಿರಿ: ಜನಾರ್ದನ ಪೂಜಾರಿ

Vishwanath S
Updated On : 28 Jan 2014, 11:29 am

ಬೆಳ್ತಂಗಡಿ: ಉತ್ತಮ ಕಾರ್ಯಕ್ಕೆ ಕೈ ಹಾಕಿದಾಗ ಟೀಕೆಗಳು ಬರುವುದು ಸಹಜ. ಅದಕ್ಕೆ ಎದೆಗುಂದುವ ಅವಶ್ಯಕತೆ ಇಲ್ಲ ಎಂದು ಕೇಂದ್ರ ಸರ್ಕಾರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಹೇಳಿದರು. ಭಾನುವಾರ ಕಾಶಿಪಟ್ಣ-ಕೇಳದ ನವೀಕೃತ ಗರ್ಭಗೃಹದಲ್ಲಿ ಸಪರಿವಾರ ಶ್ರೀ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಅಂತಿಮ ದಿನದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು. ಟೀಕೆ ಮಾಡುವವರು ಕೆಲಸ ಮಾಡುವ ಜಾಯಮಾನದವರಲ್ಲ., ಹವ್ಯಾಸ. ಟೀಕೆ ನಮಗೆ ಸ್ಫೂರ್ತಿಯಾಗಬೇಕು ಎಂದರು.
 ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕಟೀಲು ದೇವಳ ಪ್ರಧಾನ ಅರ್ಚಕ ಅನಂತಪದ್ಮನಾಭ ಅಸ್ರಣ್ಣ ಆಶೀರ್ವಚನ ನೀಡಿದರು. ಬೊರಿವಿಲಿ ಕ್ಷೇತ್ರದ ಶಾಸಕ ಗೋಪಾಲ ಶೆಟ್ಟಿ, ಉಜಿರೆ ಜನಾರ್ದನ ದೇವಸ್ಥಾನದ ಆಡಳಿತೆ ಮೊಕ್ತೇಸರ ವಿಜಯರಾಘವ ಪಡ್ವೆಟ್ನಾಯ, ರಾಷ್ಟ್ರೀಯ ಮಾನವ ಹಕ್ಕು ಪರಿಷತ್ ರಾಜ್ಯಾಧ್ಯಕ್ಷ ರೋಬರ್ಟ್ ಡಿ' ಸೋಜ, ಉದ್ಯಮಿಗಳಾದ ಆನಂದ ಶೆಟ್ಟಿ, ಸುಂದರ ಸಿ. ಪೂಜಾರಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಧ.ಗ್ರಾ. ಯೋಜನೆಯ ನಿರ್ದೇಶಕ ವಿಶ್ವನಾಥ ಶೆಟ್ಟಿ ಇದ್ದರು.
ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಂ.ಕೆ. ರತ್ನಾಕರ ಮರೋಡಿ, ಪ್ರಧಾನ ಕಾರ್ಯದರ್ಶಿ ಶಂಕರ ಭಟ್ ಎಸ್. ಬಾಲ್ಯ, ಸಂಚಾಲಕರು ಪಿ.ಕೆ. ರಾಜು ಪೂಜಾರಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಪಿ. ಧರಣೇಂದ್ರ ಕುಮಾರ್ ಹೊಸಂಗಡಿ ಇದ್ದರು.
ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಸತೀಶ್ ಕೆ. ಸ್ವಾಗತಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಪದ್ಮಪ್ರಸಾದ ಅಜಿಲ ಪ್ರಸ್ತಾವಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement