ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಕಟೀಲು: ತಾಳಮದ್ದಳೆ ದಶಾಹ ಸಮಾರೋಪ ಇಂದು

Rashmi Kasaragodu
Updated On : 20 Jul 2014, 1:57 am

ಮೂಲ್ಕಿ: ಕಟೀಲಿನ ಶ್ರೀ ದುರ್ಗಾಪರಮೇಶ್ವರಿ ದೇವಳದ ಆಶ್ರಯದಲ್ಲಿ ಕಟೀಲಿನ ಸರಸ್ವತಿ ಸದನದಲ್ಲಿ ನಡೆಯುತ್ತಿರುವ ಹತ್ತು ದಿನಗಳ ತಾಳಮದ್ದಳೆ ದಶಾಹ-2014 ಮಂತ್ರ ಮಹಾರ್ಣವ ಸಮಾರೋಪ ಸಮಾರಂಭ ಭಾನುವಾರ ಸಂಜೆ ನಡೆಯಲಿದೆ. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸಚಿವ ಕೆ. ಅಭಯಚಂದ್ರ ಜೈನ್ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಸಂಸದ ನಳಿನ್ ಕುಮಾರ್ ಕಟೀಲು, ಖ್ಯಾತ ಹೃದ್ರೋಗ ತಜ್ಞ ಡಾ. ಪದ್ಮನಾಭ ಕಾಮತ್, ರಾಜಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತ ನಿರ್ದೇಶಕ ರಾಜೇಶ್ ಚೌಟ, ಉದ್ಯಮಿಗಳಾದ ಮೂಡುಬಿದಿರೆಯ ಶ್ರೀಪತಿ ಭಟ್, ನಾರಾಯಣ ಪಿ.ಎಂ. ಅತಿಥಿಗಳಾಗಿ ಭಾಗವಹಿಸಲಿದ್ದು ಕಟೀಲು ದೇವಳದ ಅನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ, ಆಡಳಿತಾಧಿಕಾರಿ ನಿಂಗಯ್ಯ, ಅರ್ಚಕರಾದ ಕೆ. ಲಕ್ಷ್ಮೀನಾರಾಯಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ ಉಪಸ್ಥಿತರಿರುವರು. ಭಾನುವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಮಂತ್ರ ರಾಮ ತಾರಕ ರಾಮಾಂಜನೇಯ ಕಾಳಗ, ಮಧ್ಯಾಹ್ನದಿಂದ ರಾತ್ರಿಯವರೆಗೆ ಮಂತ್ರ ವಿಷ್ಣು ಸಹಸ್ರನಾಮ ಭೀಷ್ಮಾರ್ಜುನ ಕಾಳಗ ತಾಳಮದ್ದಳೆ ಜರುಗಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement