ಬಿ.ಸಿ. ರೋಡ್: ರೈತ ಸಂಪರ್ಕ ಕೇಂದ್ರಕ್ಕೆ ಶಿಲಾನ್ಯಾಸ
ಬಂಟ್ವಾಳ: ತಾಲೂಕಿಗೆ ಮಂಜೂರಾದ ರೈತ ಸಂಪರ್ಕ ಕೇಂದ್ರ ನಿರ್ಮಾಣಕ್ಕೆ ಬಿ.ಸಿ.ರೋಡ್ ಕೃಷಿ ಇಲಾಖೆ ಕಚೇರಿ ಸಮೀಪ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಶನಿವಾರ ಶಿಲಾನ್ಯಾಸ ನೆರವೇರಿಸಿದರು. ಕೆಆರ್ಡಿಎಲ್ ಎಕ್ಸಿಕ್ಯೂಟಿವ್ ಎಂಜಿನಿಯರ್ ಶೇಷಾದ್ರಿ, ನಾಗರಾಜಯ್ಯ, ಕೃಷಿಕ ಸಮಾಜದ ಅಶೋಕ್ ಕುಮಾರ್ ಬರಿಮಾರ್, ಬಂಟ್ವಾಳ ತಾ.ಪಂ. ಮಾಜಿ ಅಧ್ಯಕ್ಷ ಪದ್ಮನಾಭ ರೈ, ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ಸದಸ್ಯ ಪದ್ಮಶೇಖರ ಜೈನ್, ಜಿ.ಪಂ. ಸದಸ್ಯ ಎಂ.ಎಸ್. ಮಹಮ್ಮದ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಕಾಂಗ್ರೆಸ್ ಮುಖಂಡ ಪಿಯೂಸ್ ರೊಡ್ರಿಗಸ್ ಇದ್ದರು.