ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಮಂಗಳೂರು ರೈಲು ನಿಲ್ದಾಣ ವಿಶ್ವದರ್ಜೆಗೆ ಶೀಘ್ರ ಜಾಗ

Rashmi Kasaragodu
Updated On : 20 Jul 2014, 1:57 am

ಮಂಗಳೂರು: ಮಂಗಳೂರು ಕೇಂದ್ರ ರೈಲು ನಿಲ್ದಾಣವನ್ನು ವಿಶ್ವದರ್ಜೆಗೇರಿಸಲು ಸೂಕ್ತ ಸ್ಥಳ ಗುರುತಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಹೇಳಿದ್ದಾರೆ. ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ವಿಶ್ವದರ್ಜೆ ನಿಲ್ದಾಣಕ್ಕೆ ಸರಿಯಾದ ಜಾಗ ಗುರುತಿಸುವಂತೆ ರೈಲ್ವೆ ಸಚಿವ ಡಿ.ವಿ.ಸದಾನಂದ ಗೌಡ ತನಗೆ ಸೂಚನೆ ನೀಡಿದ್ದಾರೆ. ಎಲ್ಲಿ ಸೂಕ್ತ ಜಾಗ ಇದೆ ಎಂಬುದನ್ನು ಪರಿಶೀಲಿಸಿ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು. ಪಂಪ್‌ವೆಲ್‌ನಲ್ಲಿ ಬಸ್ ನಿಲ್ದಾಣ ರಚನೆಗೆ ಈ ವಾರವೇ ಟೆಂಡರ್ ಕರೆಯಲಾಗುವುದು ಎಂದು ಮಹಾನಗರ ಪಾಲಿಕೆ ಅಧಿಕಾರಿ ತಿಳಿಸಿದರು. ಪಂಪ್‌ವೆಲ್‌ನಲ್ಲಿ ಕಾದಿರಿಸಿದ ಜಾಗದಲ್ಲೇ ಹೊಸ ಬಸ್ ನಿಲ್ದಾಣ ನಿರ್ಮಿಸಲಾಗುವುದು ಎಂದರು. ಕೊಟ್ಟಾರ ಅಥವಾ ಅಳಪೆಯಲ್ಲಿ ಜಿಲ್ಲಾಧಿಕಾರಿ ಸಂಕೀರ್ಣ ನಿರ್ಮಿಸಲು ಸರ್ವೇ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement