ಹಲ್ಲೆ; ಇನ್ನಿಬ್ಬರು ಆರೋಪಿಗಳ ಸೆರೆ
ಬೆಳ್ತಂಗಡಿ: ಉಜಿರೆಯಲ್ಲಿ ಬುಧವಾರ ಯುವಕ ಹಾಗೂ ಯುವತಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳನ್ನು ಶುಕ್ರವಾರ ಬೆಳ್ತಂಗಡಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕನ್ಯಾಡಿ ಸಮೀಪದ ಕಲ್ಮಂಜ ನಿವಾಸಿಗಳಾದ ಪ್ರವೀಣ್ ಹಾಗೂ ಕಿರಣ್ ಬಂಧಿತರು. ಇನ್ನುಳಿದವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು ಈವರೆಗೆ ಆರು ಮಂದಿಯನ್ನು ಬಂಧಿಸಿದಂತಾಗಿದೆ. ಗುರುವಾರ ಬಂಧಿಸಿದ್ದ ನಾಲ್ವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಶುಕ್ರವಾರ ಹಾಜರು ಪಡಿಸಿದ್ದು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.