ಮಹಿಳಾ ದೌರ್ಜನ್ಯ ವಿರುದ್ಧ ಕಠಿಣ ಕಾನೂನು ಜಾರಿಯಾಗಲಿ: ಶ್ಯಾಮ್ಸುದರ್ಶನ್
ಪುತ್ತೂರು: ಇತ್ತೀಚೆಗೆ ಹಲವು ಕಡೆಗಳಲ್ಲಿ ಮಹಿಳಾ ದೌರ್ಜನ್ಯ ಹೆಚ್ಚಾಗುತ್ತಿದ್ದು, ಪುತ್ತೂರು ಸುರಕ್ಷಿತ ಎಂದು ಭಾವಿಸುವಂತಿಲ್ಲ. ಮಹಿಳಾ ದೌರ್ಜನ್ಯ ವಿರುದ್ಧ ಕಠಿಣ ಕಾನೂನು ಕ್ರಮವನ್ನು ರಾಜ್ಯ ಸರ್ಕಾರ ಜಾರಿಗೊಳಿಸಬೇಕಿದೆ ಎಂದು ಎಬಿವಿಪಿ ತಾಲೂಕು ಅಧ್ಯಕ್ಷ ಶ್ಯಾಮ್ಸುದರ್ಶನ್ ಹೇಳಿದರು.
ಅವರು ಮಹಿಳಾ ದೌರ್ಜನ್ಯ ವಿರೋಧಿಸಿ ಎಬಿವಿಪಿ ವಿದ್ಯಾರ್ಥಿಗಳು ಮಂಗಳವಾರ ಪುತ್ತೂರು ಸಹಾಯಕ ಆಯುಕ್ತರ ಕಚೇರಿ ಎದುರು ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.
ವಿದ್ಯಾರ್ಥಿನಿ ಕಾವೇರಿ, ವಿವೇಕಾನಂದ ಕಾಲೇಜು ವಿದ್ಯಾರ್ಥಿ ಸಂಘ ಜೊತೆ ಕಾರ್ಯದರ್ಶಿ ಸ್ವಾತಿ ಆಚಾರ್ಯ ಮಾತನಾಡಿದರು.
ವಿದ್ಯಾರ್ಥಿಗಳಾದ ಅನುದೀಪ್, ನಿಧೀಶ್ ಉಡುಪ, ಯಶಸ್ವಿನಿ ಮಾತನಾಡಿದರು.
ನೆಹರು ನಗರ ವಿವೇಕಾನಂದ ಕಾಲೇಜಿನ ವಿವೇಕಾನಂದ ಪ್ರತಿಮೆ ಬಳಿಯಿಂದ ಪುತ್ತೂರು ಸಹಾಯಕ ಆಯುಕ್ತರ ಕಚೇರಿವರೆಗೆ ವಿದ್ಯಾರ್ಥಿಗಳು ಮೆರವಣಿಗೆ ನಡೆಸಿದರು. ಸಹಾಯಕ ಆಯುಕ್ತರಿಗೆ ಎಬಿವಿಪಿ ಜಿಲ್ಲಾ ಸಂಚಾಲಕ್ ಮಚ್ಚಿಮಲೆ ವಿರೂಪಾಕ್ಷ ಭಟ್ ಮನವಿ ಸಲ್ಲಿಸಿದರು.
ಕಾಣಿಯೂರು ಕಾಲೇಜು ವಿವಾದಕ್ಕೆ ರಾಜ್ಯ ಸರ್ಕಾರ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲವಾಗಿದೆ. ಸಮಸ್ಯೆಯಿಂದ ನೊಂದ ವಿದ್ಯಾರ್ಥಿಗಳು ಬೇರೆ ಕಾಲೇಜನ್ನು ಆಶ್ರಯಿಸುವಂತಾಯಿತು. ರಾಜ್ಯ ಸರ್ಕಾರ ಕೂಡಲೇ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು. ತಪ್ಪಿದಲ್ಲಿ ಎಬಿವಿಪಿ ಸೂಕ್ತ ಉತ್ತರ ನೀಡಲಿದೆ ಎಂದು ಎಚ್ಚರಿಸಿದರು.