ಬುದ್ಧಿಮಾಂದ್ಯ ಹೆಣ್ಣುಮಕ್ಕಳ ಡೇ ಕೇರ್ ಸೆಂಟರ್: ದ.ಕ. ಡಿಸಿ
ಮಂಗಳೂರು: ಬುದ್ಧಿಮಾಂದ್ಯ ಹೆಣ್ಣುಮಕ್ಕಳಿಗಾಗುವ ದೌರ್ಜನ್ಯ ತಡೆಗಟ್ಟಲು ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಡೇ ಕೇರ್ ಸೆಂಟರ್ ತೆರೆಯಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಹೇಳಿದ್ದಾರೆ. ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ವಿಶೇಷ ಶಿಕ್ಷಕರು ಹಾಗೂ ಶಿಕ್ಷಕೇತರ ಸಂಘದವರು ಭಿನ್ನ ಸಾಮರ್ಥ್ಯದ ಹೆಣ್ಣು ಮಕ್ಕಳ ರಕ್ಷಣೆಗಾಗಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಬಡ, ಕೂಲಿ ಕಾರ್ಮಿಕರು ತಮ್ಮ ಬುದ್ದಿಮಾಂದ್ಯ ಮಕ್ಕಳ ನ್ನು ಮನೆಯಲ್ಲೇ ಬಿಟ್ಟು ಕೆಲಸಕ್ಕೆ ಹೋಗುವುದರಿಂದ ಸಾಮಾಜಿಕ ಪೀಡಕರು ಸನ್ನಿವೇಶ ದುರುಪಯೋಗಪಡಿಸಿ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಸೇರಿದಂತೆ ಲೈಂಗಿಕ ಕಿರುಕುಳ ನೀಡುತ್ತಾರೆ. ಇದನ್ನು ತಪ್ಪಿಸಲು ಹೆಣ್ಣು ಮಕ್ಕಳ ಡೇ ಕೇರ್ ಸೆಂಟರ್ ತೆರೆಯಲು ಸಂಬಂಧಿಸಿದ ಇಲಾಖೆಯೊಂದಿಗೆ ಸಮಾಲೋಚಿಸುವುದಾಗಿ ಭರವಸೆ ನೀಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ವಸಂತ್ ಕುಮಾರ್ ಶೆಟ್ಟಿ, ಭಿನ್ನ ಸಾಮರ್ಥ್ಯದ ಮಕ್ಕಳು ಇದ್ದರು.