ಮೋದಿ ಸರ್ಕಾರ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಸುಳ್ಯ: ಒಳ್ಳೆಯ ದಿನಗಳು ಬರಲಿವೆ ಎಂಬ ಘೋಷಣೆಯೊಂದಿಗೆ ಅಧಿಕಾರಕ್ಕೆ ಬಂದ ಮೋದಿ ಸರ್ಕಾರದಲ್ಲಿ ಬೆಲೆ ಏರಿಕೆ ದಿನಗಳು ಬಂದಿವೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ವೆಂಕಪ್ಪ ಗೌಡ ಅಭಿಪ್ರಾಯಪಟ್ಟಿದ್ದಾರೆ. ಸುಳ್ಯದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದದರು. ದೇಶದ ಎಲ್ಲೇ ಅತ್ಯಾಚಾರ ಹಾಗೂ ಮಹಿಳಾ ದೌರ್ಜನ್ಯ ನಡೆದರೂ ನಾವದನ್ನು ಖಂಡಿಸುತ್ತೇವೆ. ಆದರೆ ಈ ವಿಚಾರವನ್ನು ರಾಜಕೀಕರಣಗೊಳಿಸಲು ಬಿಜೆಪಿ ಶ್ರಮಿಸುತ್ತಿದ್ದು ಅದಕ್ಕಾಗಿ ವಿದ್ಯಾರ್ಥಿಗಳನ್ನು ಬೀದಿಗಿಳಿಸುವ ಪ್ರಯತ್ನ ಮಾಡುತ್ತಿರುವುದು ಖಂಡನೀಯ ಎಂದರು. ಕೆಪಿಸಿಸಿ ಸದಸ್ಯ ಡಾ. ರಘು, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್. ಗಂಗಾಧರ್, ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಪವಾಝ್, ಅಕ್ರಮ ಸಕ್ರಮ ಸಮಿತಿ ಸದಸ್ಯ ಸುಧೀರ್ ರೈ ಮೇನಾಲ, ಪಪಂ ಸದಸ್ಯ ಪುರುಷೋತ್ತಮ ಬಂಗಾರಕೋಡಿ, ನಂದರಾಜ ಸಂಕೇಶ, ಲಕ್ಷ್ಮಣ ಶೆಣೈ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.