ಹಸಿರು ಮಂಗಳೂರು' ಯೋಜನೆ: ಮೇಯರ್
ಮಂಗಳೂರು: ಅರಣ್ಯ ಇಲಾಖೆ ಮತ್ತು ದ.ಕ. ಜಿಲ್ಲಾ ಕಾರ್ಯನಿರತ ಪ್ರತಕರ್ತರ ಸಂಘದ ವತಿಯಿಂದ ಶುಕ್ರವಾರ ಲೇಡಿಹಿಲ್ ಪ್ರೆಸ್ಕ್ಲಬ್ ಬಳಿ ವನಮಹೋತ್ಸವ ನಡೆಯಿತು. ಮೇಯರ್ ಮಹಾಬಲ ಮಾರ್ಲ, ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ. ಸಂಜಯ ಬಿಜೂರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಓ. ಪಾಲಯ್ಯ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅಬ್ಬಾಸ್, ವಲಯ ಅರಣ್ಯ ಅಧಿಕಾರಿ ಕ್ಲಿಫರ್ಡ್ ಲೋಬೊ, ಮನಪಾ ಪರಿಸರ ವಿಭಾಗದ ಎಂಜಿನಿಯರ್ ವಿ. ಮಧು, ಪ್ರೆಸ್ಕ್ಲಬ್ ಅಧ್ಯಕ್ಷ ರಾಮಕೃಷ್ಣ ಆರ್. ಇದ್ದರು. ಪತ್ರಕರ್ತ ಸಂಘದ ಅಧ್ಯಕ್ಷ ಪಿ.ಬಿ. ಹರೀಶ್ ರೈ ಸ್ವಾಗತಿಸಿ, ಪ್ರ.ಕಾರ್ಯದರ್ಶಿ ಶ್ರೀನಿವಾಸ ಇಂದಾಜೆ ವಂದಿಸಿದರು.