ಸುಬ್ರಹ್ಮಣ್ಯ:ರಕ್ತದಾನ ಶಿಬಿರ ಇಂದು
ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ರೋಟರಿ ಕ್ಯಾಂಪ್ಕೊ ಬ್ಲಡ್ಬ್ಯಾಂಕ್, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಜೇಸಿಐ ಸುಬ್ರಹ್ಮಣ್ಯ ಕುಕ್ಕೆಶ್ರೀ ಹಾಗೂ ಅನುಗ್ರಹ ಎಜುಕೇಶನ್ ಟ್ರಸ್ಟ್ನ ಸಹಯೋಗದೊಂದಿಗೆ 29ರಂದು ಬೃಹತ್ ರಕ್ತದಾನ ಶಿಬಿರ ಕೆ.ಎಸ್.ಎಸ್. ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಪ್ರಾಚಾರ್ಯ ಪ್ರೊ.ದಿನೇಶ್ ಕಾಮತ್, ರೋಟರಿ ಕ್ಲಬ್ ಅಧ್ಯಕ್ಷ ಲೋಕೇಶ್ ಬಿ. ಎನ್, ಜೇಸಿ ಅಧ್ಯಕ್ಷ ಪ್ರಭಾಕರ ಪಡ್ರೆ, ಜೇಸಿ ವಲಯಾಧ್ಯಕ್ಷ ಚಂದ್ರಶೇಖರ ನಾಯರ್, ರೋಟರಿ ಕ್ಯಾಂಪ್ಕೊ ಬ್ಲಡ್ ಬ್ಯಾಂಕ್ ಪುತ್ತೂರು ವೈದ್ಯಾಧಿಕಾರಿ ಡಾ. ರಾಮಚಂದ್ರ ಭಟ್, ಎನ್ನೆಸ್ಸೆಸ್ ಯೋಜನಾಧಿಕಾರಿ ಪುಷ್ಪರಾಜ್ ಹಾಗೂ ಪ್ರಸಾದ್ ಭಾಗವಹಿಸಲಿದ್ದಾರೆ.