ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಬೆಳಂದೂರು ಕಾಲೇಜ್ ಶಿಲಾನ್ಯಾಸ ವಿರೋಧಿಸಿ ಬಿಜೆಪಿ ಪ್ರತಿಭಟನೆ

Rashmi Kasaragodu
Updated On : 18 Jun 2014, 12:45 pm

ಪುತ್ತೂರು: ಬೆಳಂದೂರಿನಲ್ಲಿ ಕಾಲೇಜು ಕಟ್ಟಡ ಶಿಲಾನ್ಯಾಸ ಸಮಾರಂಭ ನಡೆಯುವುದನ್ನು ವಿರೋಧಿಸಿ ಕಾಣಿಯೂರಿನಲ್ಲಿ ಸುಳ್ಯ ಶಾಸಕ ಅಂಗಾರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಶಾಸಕ ಅಂಗಾರ, ಕಾಲೇಜು ಕಟ್ಟಡ ವಿಚಾರದಲ್ಲಿ ಇದು ಸರ್ಕಾರದ ಅಧಿಕೃತ ಕಾರ್ಯಕ್ರಮವಲ್ಲ. ಕೆಲವರು ಸೇರಿಕೊಂಡು ಬೋಗಸ್ ಕಮಿಟಿ ಮಾಡಿಕೊಂಡು ಅನಧಿಕೃತ ನಿರ್ಣಯ ಮಾಡಿ ಸರ್ಕಾರಕ್ಕೆ ಕಳುಹಿಸಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೆ ನಿರ್ಣಯ ಮಾಡಲಾಗಿದೆ ಎಂದು ಆರೋಪಿಸಿದರು.  
ರಾಜಕೀಯ ಉದ್ದೇಶವಿಲ್ಲ: ಈ ವಿಚಾರದಲ್ಲಿ ತಾನು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತನಾಡಿದ್ದೇನೆ. ಈ ಕುರಿತು ಮಾತನಾಡುವ ಎಂದು ಅವರು ತನ್ನಲ್ಲಿ ತಿಳಿಸಿದ್ದಾರೆ. ತನಗೆ ಇದರಲ್ಲಿ ರಾಜಕೀಯ ಮಾಡಬೇಕೆಂಬ ಉದ್ದೇಶ ಇಲ್ಲ ಎಂದು ತಿಳಿಸಿದರು.
ತಾ.ಪಂ. ಅಧ್ಯಕ್ಷೆ ಪುಲಸ್ಯ ರೈ ಮಾತನಾಡಿ, ಇದು ಸಂಪೂರ್ಣವಾಗಿ ಜನವಿರೋಧಿ ಹಾಗೂ ವಿದ್ಯಾರ್ಥಿ ವಿರೋಧಿ ನೀತಿಯಾಗಿದೆ. ಇಂತಹ ಧೋರಣೆಗೆ ವಿರೋಧವಿದೆ ಎಂದು ತಿಳಿಸಿದರು.
ಕಾಲೇಜು ಸಮಿತಿ ಕಾರ್ಯಾಧ್ಯಕ್ಷ ಲಕ್ಷ್ಮಣ ಗೌಡ ಕರಂದ್ಲಾಜೆ, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ದಿನೇಶ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement