20 ತಿಂಗಳಲ್ಲಿ ರು. 10 ಕೋಟಿ ಕಾಮಗಾರಿ: ಗುಣವತಿ
ಸುಳ್ಯ: ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ತಮ್ಮ 20 ತಿಂಗಳ ಅಧ್ಯಕ್ಷತೆಯ ಅವಧಿಯಲ್ಲಿ ರು. 17 ಕೋಟಿ ಮೊತ್ತದ ಕಾಮಗಾರಿ ಮಂಜೂರಾಗಿದ್ದು, ಅದರಲ್ಲಿ ರು. 10 ಕೋಟಿ ವೆಚ್ಚದ ಕಾಮಗಾರಿಗಳು ಪೂರ್ಣಗೊಂಡಿವೆ. ರು. 7 ಕೋಟಿ ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಸುಳ್ಯ ತಾ.ಪಂ. ನಿರ್ಗಮನಾಧ್ಯಕ್ಷೆ ಗುಣವತಿ ಕೊಲ್ಲಂತಡ್ಕ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶುಚಿತ್ವ ಹಾಗೂ ಕುಡಿಯುವ ನೀರಿನ ಪೂರೈಕೆಗೆ ಆದ್ಯತೆ ನೀಡುವುದಾಗಿ ನೂತನ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ ಹೇಳಿದರು. ಉಪಾಧ್ಯಕ್ಷೆ ಮಮತಾ ಬೊಳುಗಲ್ಲು, ಸ್ಥಾಯಿ ಸಮಿತಿ ಅಧ್ಯಕ್ಷೆ ಭಾಗ್ಯ ಪ್ರಸನ್ನ, ಸದಸ್ಯರಾದ ಕೇಶವ ಭಟ್ ಮುಳಿಯ, ರಘುರಾಮ ಅಂಗಡಿಮಜಲು ಇದ್ದರು.