ಲಾರಿ- ಟ್ಯಾಂಕರ್ ಡಿಕ್ಕಿ; ಹೆದ್ದಾರಿ ಸಂಚಾರಕ್ಕೆ ತೊಡಕು
ಉಪ್ಪಿನಂಗಡಿ: ಶಿರಾಡಿ ಘಾಟಿಯ ಕೆಂಪಳ್ಳ ಎಂಬಲ್ಲಿ ಲಾರಿ ಮತ್ತು ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ ಹೆದ್ದಾರಿ ಸಂಚಾರಕ್ಕೆ ತೊಡಕುಂಟಾಗಿತ್ತು. ಶನಿವಾರ ಮುಂಜಾನೆ ಸಕಲೇಶಪುರ ಠಾಣೆ ವ್ಯಾಪ್ತಿಯ ಈ ಪ್ರದೇಶದಲ್ಲಿ ಮಂಗಳೂರಿನಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಟ್ಯಾಂಕರ್ ಮತ್ತು ಎದುರಿನಿಂದ ಬರುತ್ತಿದ್ದ ಲಾರಿ ಡಿಕ್ಕಿಯಾಗಿ ವಾಹನಗಳು ಜಖಂಗೊಂಡವು. ಇದರಿಂದ ಸುಮಾರು 2 ಗಂಟೆಗಳ ಕಾಲ ಹೆದ್ದಾರಿ ಸಂಚಾರಕ್ಕೆ ತಡೆಯುಂಟಾಗಿತ್ತು. ಯಾರಿಗೂ ಗಾಗಳಾಗಿಲ್ಲ ಎಂದು ತಿಳಿದುಬಂದಿದೆ.
ಅಪಘಾತ; ಬೈಕ್ ಸವಾರ ಗಾಯ
ಮೂಲ್ಕಿ: ಕೊಕ್ಕರ್ಕಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರು ಕಡೆಗೆ ಹೋಗುತ್ತಿದ್ದ ಖಾಸಗಿ ಎಕ್ಸ್ಪ್ರೆಸ್ ಬಸ್ ಮೂಲ್ಕಿ ಕಡೆಗೆ ಬರುತ್ತಿದ್ದ ಮೋಟಾರ್ ಬೈಕ್ಗೆ ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡ ಘಟನೆ ಶನಿವಾರ ನಡೆದಿದೆ. ಗಾಯಾಳು ಬೈಕ್ ಸವಾರ ಪಡುಬಿದ್ರಿ ನಿವಾಸಿ ಎನ್ನಲಾಗಿದೆ.