ಲೋಕಾಯುಕ್ತ ದೂರು ಸ್ವೀಕಾರ 28 ರಿಂದ
ಮಂಗಳೂರು: ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು ಜಿಲ್ಲೆಯ ಕೆಲವು ಪ್ರದೇಶಗಳಿಗೆ ಭೇಟಿ ನೀಡಲಿದ್ದು, ಸಾರ್ವಜನಿಕರು ಸರ್ಕಾರಿ ಅಧಿಕಾರಿಗಳ ವಿರುದ್ಧ ತಮ್ಮ ದೂರುಗಳಿದ್ದಲ್ಲಿ ಸಲ್ಲಿಸಬಹುದು. ಜೂ. 28 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಗಂಟೆಗೆ ಬೆಳ್ತಂಗಡಿ ತಾಲೂಕು ಕಚೇರಿ, ಸಂಜೆ 3 ರಿಂದ 4.30ರವರೆಗೆ ಬಂಟ್ವಾಳ ತಾಲೂಕು ಕಚೇರಿಗೆ ಭೇಟಿ ನೀಡುವರು. ಜೂ. 30 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕು ಕಚೇರಿ ಹಾಗೂ ಸಂಜೆ 3 ರಿಂದ 4.30ರವೆರೆಗೆ ಪುತ್ತೂರು ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ದೂರು ಸ್ವೀಕರಿಸುವರು. ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರು 0824-2453420 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.