ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಕುಡಿವ ನೀರಿಗೆ 16.4 ಕೋಟಿ

Rashmi Kasaragodu
Updated On : 25 Jun 2014, 11:30 am

ಹೊಸದುರ್ಗ: ತಾಲೂಕಿನಲ್ಲಿ ಕೆಲವೆಡೆ ನೀರಿನ ಸಮಸ್ಯೆ ತೀವ್ರವಾಗಿದ್ದು, ಪರಿಹಾರಕ್ಕೆ ಸರ್ಕಾರದಿಂದ 16.4 ಕೋಟಿ ಹಣವನ್ನು ಬಿಡುಗಡೆ ಮಾಡಿಸಲಾಗಿದೆ. ಅಗತ್ಯವಿರುವೆಡೆ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಬಿ.ಜಿ. ಗೋವಿಂದಪ್ಪ ತಿಳಿಸಿದರು.
ತಾಲೂಕಿನ ಬಾಗೂರು ಗ್ರಾಮದಲ್ಲಿ ಮಂಗಳವಾರ ಕುಡಿಯುವ ನೀರಿನ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಈಗಾಗಲೇ ತಾಲೂಕಿನಲ್ಲಿ 131 ಯೋಜಿತ ಕುಡಿಯುವ ನೀರಿನ ಕಾಮಗಾರಿಗಳು ನಡೆಯುತ್ತಿದ್ದು, ತೀವ್ರ ಅಭಾವವಿರುವ ಕಡೆ ವಿವಿಧ ಗ್ರಾಮಗಳಲ್ಲಿ 48 ಕಾಮಗಾರಿಗಳನ್ನು ಕುಡಿಯುವ ನೀರಿಗಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.
ಕುಡಿಯುವ ನೀರಿನ ಅಭಾವವಿರುವ ಕಡೆ ಕೊಳವೆಬಾವಿಗಳನ್ನು ಕೊರೆಸಲು ಕ್ರಮ ಕೈಗೊಳ್ಳಲಾಗಿದೆ. ತಾಲೂಕಿನ ಸಿಂಗೇನಹಳ್ಳಿ ಭೋವಿಹಟ್ಟಿ ಗ್ರಾಮದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗಿದೆ. ಪಟ್ಟಣದಲ್ಲಿ ಬರ ಪರಿಹಾರ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳನ್ನು ನಡೆಸಲಾಗಿದೆ. ವಿವಿಧ ಬೋರ್ವೆಲ್ಗಳ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ. ಅಗತ್ಯವಿರುವ ಕಡೆ ಟ್ಯಾಂಕರ್ಗಳ ಮೂಲಕ ನೀರು ಪೂರೈಸಲಾಗುತ್ತಿದೆ. ಕುಡಿಯುವ ನೀರಿನ ಶಾಶ್ವತ ಪರಿಹಾರಕ್ಕೆ ಮಳೆ ಆಗಲೇಬೇಕು ಎಂದರು.
ನಿವೃತ್ತ ಎಂಜಿನಿಯರ್ ಕೆ.ಸಿ. ನಿಂಗಪ್ಪ, ಜಿಲ್ಲಾ ಅಹಿಂದ ಮುಖಂಡ ಮುರುಘರಾಜೇಂದ್ರ ಒಡೆಯರ್, ನಿಶಾನಿ ಜಯಣ್ಣ, ಕಾಂಗ್ರೆಸ್ ಮುಖಂಡರಾದ ಎಂ.ಪಿ.ಶಂಕರ್, ಕೃಷ್ಣಪ್ಪ, ಗುರುಮೂರ್ತಿ, ರಾಮಪ್ಪ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement