ರಾಜ್ಯಪಾಲರು ಕುಲಪತಿ ನೇಮಿಸದಂತೆ ಮನವಿ
ಮಂಗಳೂರು: ಕರ್ನಾಟಕದ ಯಾವುದೇ ವಿಶ್ವವಿದ್ಯಾನಿಲಯಕ್ಕೆ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಕುಲಪತಿಗಳನ್ನು ತರಾತುರಿಯಾಗಿ ನೇಮಕ ಮಾಡದಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಸಂಘ ಕೇಂದ್ರ ಗೃಹ ಸಚಿವರಿಗೆ ಮನವಿ ಸಲ್ಲಿಸಿದೆ.
ಕರ್ನಾಟಕದ ರಾಜ್ಯಪಾಲರ ಅವಧಿ ಜೂ. 29 ರಂದು ಮುಗಿಯುವುದರಿಂದ ರಾಜೀವ್ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕುಲಪತಿಯ ನೇಮಕ್ಕಾಗಿ ತರಾತುರಿ ಪ್ರಯತ್ನ ನಡೆಯುತ್ತಿದೆ. ಇದರ ಹಿಂದೆ ಭಾರೀ ಭ್ರಷ್ಟಾಚಾರ ನಡೆಯುವ ಸಾಧ್ಯತೆಯಿದ್ದು, ಕೇಂದ್ರ ಸರ್ಕಾರ ಇದರ ತಡೆಗೆ ಕ್ರಮ ಕೈಗೊಳ್ಳುವಂತೆ ಎಂದು ನಗರ ಎಬಿವಿಪಿ ಕಾರ್ಯದರ್ಶಿ ಚೇತನ್ ಕುಮಾರ್ ಪಡೀಲ್ ಅವರು ಮನವಿಯಲ್ಲಿ ಆರೋಪಿಸಿದ್ದಾರೆ.