ಹರಿಶ್ಚಂದ್ರ ಪಿ. ಸಾಲ್ಯಾನ್ಗೆ ಸನ್ಮಾನ
ಮೂಲ್ಕಿ: ಹರಿಶ್ಚಂದ್ರ ಸಾಲ್ಯಾನ್ ಅವರು ಸರ್ಕಾರಿ ಸೇವೆಯೊಂದಿಗೆ ಜ್ಯೋತಿಷ್ಯ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಅವರ ನಿವೃತ್ತಿ ಜೀವನ ಉಜ್ವಲವಾಗಲಿ ಎಂದು ರಾಜ್ಯ ಯುವಜನ ಮತ್ತು ಮೀನುಗಾರಿಕಾ ಸಚಿವ ಕೆ. ಅಭಯಚಂದ್ರ ಜೈನ್ ಹೇಳಿದರು.
ಮೂಲ್ಕಿಯ ನಗರ ಪಂಚಾಯಿತಿನಲ್ಲಿ 7 ವರ್ಷಗಳ ಕಾಲ ಮುಖ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಹರಿಶ್ಚಂದ್ರ ಪಿ. ಸಾಲ್ಯಾನ್ಗೆ ಮೂಲ್ಕಿಯ ನಾಗರಿಕ ಅಭಿನಂದನಾ ಸಮಿತಿಯ ಆಶ್ರಯದಲ್ಲಿ ಮೂಲ್ಕಿಯ ವಿಜಯ ಕಾಲೇಜಿನ ಸಭಾಂಗಣದಲ್ಲಿ ನಡೆದ ಸಾರ್ವಜನಿಕ ಸನ್ಮಾನ ಕಾರ್ಯಕ್ರಮದಲ್ಲಿ ಹರಿಶ್ಚಂದ್ರ ಸಾಲ್ಯಾನ್ ಮತ್ತು ಪತ್ನಿ ವಿಜಯ ಅವರನ್ನು ಸನ್ಮಾನಿಸಿ ಮಾತನಾಡಿದರು. ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ವಹಿಸಿದ್ದು, ಕಿನ್ನಿಗೋಳಿಯ ಯುಗಪುರುಷದ ಕೆ. ಭುವನಾಭಿರಾಮ ಉಡುಪ ಶುಭಾಶಂಸನೆಗೈದರು. ಬೆಂಗಳೂರಿನ ಉದ್ಯಮಿ ಮೂಲ್ಕಿ ಬಪ್ಪನಾಡಿನ ಎಂ.ಎನ್. ನಾರಾಯಣ ಶೆಟ್ಟಿ, ಮೂಲ್ಕಿ ವಿಜಯ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ.ಎಂ.ಎ.ಆರ್. ಕುಡ್ವ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಪತ್ರಕರ್ತ ಪರಮಾನಂದ ಸಾಲ್ಯಾನ್ ಅಭಿನಂದನಾ ಭಾಷಣಗೈದರು. ಕಾಲೇಜಿನ ಪ್ರಾಚಾರ್ಯ ಕೆ.ಆರ್. ಶಂಕರ್, ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯೆ ಪಮೀದಾ ಬೇಗಂ ಇದ್ದರು.
ಸರ್ವೋತ್ತಮ ಅಂಚನ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಚಂದ್ರಶೇಖರ ಸುವರ್ಣ ವಂದಿಸಿದರು. ಸತೀಶ್ ಕಾಮತ್ ಕಾರ್ಯಕ್ರಮ ನಿರೂಪಿಸಿದರು.